ಜಿಲ್ಲೆ

ಹಣ ಲ್ಯಾಪ್ಸ್ ಆದಲ್ಲಿ ಅಧಿಕಾರಿಗಳೇ ಹೊಣೆ

ಕಲಬುರಗಿ: ಪ್ರಸಕ್ತ ಸಾಲಿಗೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಇಲಾಖೆಗಳಿಗೆ ಹಂಚಿಕೆ ಮಾಡಲಾದ ಅನುದಾನಕ್ಕೆ ಕ್ರಿಯಾ ಯೋಜನೆ ರೂಪಿಸಿ ವಷರ್ಾಂತ್ಯದೊಳಗೆ ಅನುಷ್ಠಾನ ಮಾಡುವ ಮೂಲಕ ಆರ್ಥಿಕ ಸಾಧನೆ ಮಾಡಬೇಕು. ಅನುದಾನ ಲ್ಯಾಪ್ಸ್ ಆದಲ್ಲಿ ಸಂಬಂಧಿಸಿದ ಅಧಿಕಾರಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಮಲಾಜಿ ಹೇಳಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಣಕಾಸು, ಲೆಕ್ಕಪರಿಶೋಧನೆ ಹಾಗೂ ಯೋಜನಾ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕ್ರಿಯಾ ಯೋಜನೆಯನ್ವಯ ಕಾಮಗಾರಿಗಳಿಗೆ ನಿಗದಿತ ಅನುದಾನ ಖಚರ್ು ಮಾಡದಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸಕರ್ಾರಕ್ಕೆ ವರದಿ ಮಾಡಲಾಗುವುದು. ಅನುದಾನ ಬಳಕೆಯಲ್ಲಿ ಕರ್ತವ್ಯ ಲೋಪ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
ಅನುದಾನ ಕುರಿತು ಯಾವುದೇ ಸಮಸ್ಯೆಗಳಿದ್ದಲ್ಲಿ ಅಧಿಕಾರಿಗಳು ನೇರವಾಗಿ ತಮ್ಮನ್ನು ಭೇಟಿಯಾಗಿ ಚರ್ಚಿಸಬೇಕು. ಕರೊನಾ ಸಂಕಷ್ಟದ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಯ ಕರ್ತವ್ಯವನ್ನು ಶ್ಲಾಘಿಸಿದರು.
ಮಾಜಿ ರಾಷ್ಟ್ರಪತಿ ದಿ.ಪ್ರಣಬ್ ಮುಖರ್ಜಿ ಇತ್ತೀಚೆಗೆ ನಿಧನರಾದ ಹಿನ್ನೆಲೆಯಲ್ಲಿ ಒಂದು ನಿಮಿಷ ಮೌನಾಚರಣೆ ಮಾಡಿ ಮೃತರಿಗೆ ಗೌರವ ಸಲ್ಲಿಸಲಾಯಿತು.
ಸಮಿತಿ ಸದಸ್ಯರಾದ ಶಿವರಾಜ ಪಾಟೀಲ, ಶಿವಾನಂದ ಪಾಟೀಲ, ಶಿವಶರಣಪ್ಪ ಆರ್. ಶಂಕರ, ದೇವಕ್ಕಿ ಹಿರೇಮಠ, ಕಲಾವತಿ ಮಲ್ಲ್ಲಣ್ಣ ನಾಗೂರೆ, ಸದಸ್ಯ ಕಾರ್ಯದರ್ಶಿ ಕಿಶೋರಕುಮಾರ ದುಬೆ ಇತರರು ಇದ್ದರು.