ಹುಬ್ಬಳ್ಳಿ: ಹಮಾಲಿ ಕಾರ್ವಿುಕರಿಗೆ ವಸತಿ ಯೋಜನೆ ಜಾರಿ ಮಾಡಬೇಕು, ಲಾಕ್ಡೌನ್ನಿಂದ ಸಂಕಷ್ಟದಲ್ಲಿರುವವರಿಗೆ ಆರ್ಥಿಕ ನೆರವು ನೀಡಬೇಕು, ಉಚಿತ ಆಹಾರ ಕಿಟ್ ನೀಡಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಮರಗೋಳ ಎಪಿಎಂಸಿ ಕಚೇರಿ ಎದುರು ಹಮಾಲಿ ಕಾರ್ವಿುಕರು ಗುರುವಾರವೂ ಪ್ರತಿಭಟನೆ ನಡೆಸಿದರು.
ಸ್ಥಳಕ್ಕೆ ಆಗಮಿಸಿದ ಎಪಿಎಂಸಿ ಆಡಳಿತ ಮಂಡಳಿ ಅಧ್ಯಕ್ಷ ಸಹದೇವಪ್ಪ ಸುಡಕೇನವರ, ಉಪಾಧ್ಯಕ್ಷ ಬಸವರಾಜ ನಾಯ್ಕರ, ಸದಸ್ಯರಾದ ಜಗನ್ನಾಥಗೌಡ ಪಾಟೀಲ, ಚನ್ನು ಹೊಸಮನಿ, ರಘುನಾಥಗೌಡ ಕೆಂಪಲಿಂಗನಗೌಡ್ರ, ಇತರರು ಹಮಾಲಿ ಕಾರ್ವಿುಕರ ಬೇಡಿಕೆಗಳಿಗೆ ಸ್ಪಂದಿಸಿದರು.
ವಸತಿ ಯೋಜನೆ ಬಗ್ಗೆ ಈಗಾಗಲೇ ಸರ್ಕಾರಕ್ಕೆ ಎಪಿಎಂಸಿಯಿಂದ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಬಗ್ಗೆ ಇನ್ನಷ್ಟು ಗಮನ ಸೆಳೆಯಲಾಗುವುದು. ತಮ್ಮ ಬೇಡಿಕೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಆಡಳಿತ ಮಂಡಳಿ ಭರವಸೆ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಯಿತು.
ವಿವಿಧ ಸಂಘಟನೆಗಳ ಮುಖಂಡರಾದ ರಾಜಶೇಖರ ಮೆಣಸಿನಕಾಯಿ, ಗಂಗನಗೌಡ ಪಾಟೀಲ, ಜಗದೀಶ ಬಳ್ಳಾರಿ, ಇತರರು ಹೋರಾಟಕ್ಕೆ ಬೆಂಬಲ ನೀಡಿದ್ದರು.
ಕಾರ್ವಿುಕ ಮುಖಂಡರಾದ ಗುರುಸಿದ್ದಪ್ಪ ಅಂಬಿಗೇರ, ಬಸವಣ್ಣೆಪ್ಪ ನೀರಲಗಿ, ಕರಿಯಪ್ಪ ದಳವಾಯಿ, ಕತಾಲಸಾಬ ಮುಲ್ಲಾ, ಮಹ್ಮದ ರಫಿಕ ಮುಳಗುಂದ, ಹುಸೇನಸಾಬ ನದಾಫ, ರಾಜು ಗಿರಿಸಾಗರ, ಲಕ್ಷ್ಮವ್ವ ಹೊಸೂರಿ, ಇತರರು ಪ್ರತಿಭಟನೆಯಲ್ಲಿದ್ದರು.