ಜಿಲ್ಲೆ

ಹರವೆ ಶಾಲೆಗೆ ಶೇ.90 ರಷ್ಟು ಲಿತಾಂಶ

ಚಾಮರಾಜನಗರ: ತಾಲೂಕಿನ ಹರವೆ ಗ್ರಾಮದ ಶ್ರೀ ಚನ್ನಬಸವೇಶ್ವರ ವಿದ್ಯಾಸಂಸ್ಥೆಯ ಅಂಗ್ಲ ಮಾಧ್ಯಮ ಶಾಲೆ 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 90 ರಷ್ಟು ಫಲಿತಾಂಶವನ್ನು ಪಡೆದುಕೊಂಡಿದೆ.

ಶಾಲೆಯ 27 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ 9 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ ಹಾಗೂ 11 ವಿದ್ಯಾರ್ಥಿಗಳು ಪ್ರಥಮ ದರ್ಜೆ ಸೇರಿದಂತೆ 24 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ವಿದ್ಯಾರ್ಥಿಗಳಾದ ಜಿ.ಕಾವೇರಿ (610) ಕೆ.ಎಸ್.ಮಾನಸ (597) ಕೆ.ಎನ್.ಸಿಂಚನ (592) ಶಾಲೆಗೆ ಹೆಚ್ಚಿನ ಅಂಕಗಳನ್ನು ಪಡೆದುಕೊಂಡಿದ್ದಾರೆ.

ಈ ಮೂಲಕ ಶಾಲೆಯು ಎ ಶ್ರೇಣಿ ಪಡೆದುಕೊಂಡಿದೆ. ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ, ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹಾಗೂ ಪಾಲಕರನ್ನು ಸಂಸ್ಥೆಯ ಅಧ್ಯಕ್ಷ ಶ್ರೀ ಸರ್ಪಭೂಷಣಸ್ವಾಮೀಜಿ ಅಭಿನಂದಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.