ಗುರುಮಠಕಲ್: ತಾಲೂಕಿನ ಚಂಡರಿಕಿ ಗ್ರಾಮದ ಹರಿಜನವಾಡ ಬಡಾವಣೆಯ ೪ನೇ ವಾರ್ಡ್ನಲಿರುವ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ಹೋಗಿ ಹಲವು ತಿಂಗಳಾದರೂ ಸಂಬAಧಿಸಿದ ಅಧಿಕಾರಿಗಳ ದಿವ್ಯ ನಿರ್ಲಕ್ಷÈದಿಂದ ಇನ್ನೂ ದುರಸ್ತಿಯಾಗದಿರುವುದಕ್ಕೆ ವಾರ್ಡ್ನ ಜನ ಹಿಡಿ ಶಾಪ ಹಾಕುವಂತಾಗಿದೆ.
ಇದು ಆರಂಭಗೊAಡು ಕೆಲ ತಿಂಗಳು ಕಳೆದ ನಂತರ ಕೆಟ್ಟು ನಿಂತಿದೆ. ಆದರೆ ಇದಾಗಿ ಹಲವು ತಿಂಗಳು ಕಳೆದರೂ ದುರಸ್ತಿ ಮಾತ್ರ ಕಂಡಿಲ್ಲ. ಇದರಿಂದ ಸ್ಥಳೀಯರಿಗೆ ಶುದ್ಧ ಕುಡಿಯುವ ನೀರು ಲಭಿಸುತ್ತಿಲ್ಲ. ಗ್ರಾಮದ ಈ ಬಡಾವಣೆ ಸಾವಿರಕ್ಕೂ ಅಧಿಕ ಜನಸಂಖ್ಯೆ ಹೊಂದಿದ್ದರೂ ಶುದ್ಧ ನೀರಿನಿಂದ ವಂಚಿತರಾಗಿದ್ದಾರೆ.
ಈ ಕುರಿತು ಅನೇಕ ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಆದರೆ ಗ್ರಾಮಸ್ಥರು ಶುದ್ಧ ಕುಡಿಯುವ ನೀರಿಗಾಗಿ ಈ ಘಟಕವನ್ನೇ ಆಶ್ರಯಿಸಿದ್ದಾರೆ. ಹೀಗಾಗಿ ಈಗಲಾದರೂ ಸಂಬAಧಿಸಿದ ಅಧಿಕಾರಿಗಳು ಕೂಡಲೇ ಘಟಕವನ್ನು ದುರಸ್ತಿ ಮಾಡಿ ಜನತೆಗೆ ಶುದ್ಧ ನೀರು ಒದಗಿಸಬೇಕು ಎಂಬುದು ಗ್ರಾಮಸ್ಥರ ಮನವಿಯಾಗಿದೆ.