ಬಳ್ಳಾರಿ : ನಗರದ ಡಿಸಿ ಕಚೇರಿ ಆವರಣದಲ್ಲಿನ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಕೋರ್ಟ್‌ನಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 24 ಪ್ರಕರಣಗಳಲ್ಲಿ 19 ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥವಾಗಿದ್ದು, 93.81 ಲಕ್ಷ ರೂ. ಪಕ್ಷಗಾರರು ಪಡೆದಿರುತ್ತಾರೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಎನ್. ತಿಪ್ಪೆಸ್ವಾಮಿ ತಿಳಿಸಿದ್ದಾರೆ.