ಜಿಲ್ಲೆ

ಹಳಿ ತಪ್ಪಿದ ಗೂಡ್ಸ್ ರೈಲು

ಬೆಳಗಾವಿ: ನಗರದ ರೈಲು ನಿಲ್ದಾಣ ಬಳಿಯೇ ಮಂಗಳವಾರ ಮಿರಜ್ ಕಡೆಗೆ ಹೊರಟಿದ್ದ ಗೂಡ್ಸ್ ರೈಲಿನ ಎರಡು ಬೋಗಿಗಳು ಹಳಿ ತಪ್ಪಿ ಉರುಳಿದ ಘಟನೆ ನಡೆದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಜಿಂದಾಲ್ ಕಾರ್ಖಾನೆಗೆ ಕಬ್ಬಿಣದ ಅದಿರು ತುಂಬಿಕೊಂಡು ಮಿರಜ ಕಡೆಗೆ ಹೊರಟಿದ್ದ ಗೂಡ್ಸ್ ರೈಲು ಒಂದು ಹಳಿಯಿಂದ ಇನ್ನೊಂದು ಹಳಿಗೆ ರೈಲು ಬದಲಾಯಿಸುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಈ ವೇಳೆ ಕೆಲ ಗಂಟೆಗಳ ಕಾಲ ಇತರ ರೈಲು ಸಂಚಾರದಲ್ಲೂ ವ್ಯತ್ಯಾಸ ಉಂಟಾಯಿತು.