ಜಿಲ್ಲೆ

ಹಳಿಯಾಳ ಕುಸ್ತಿ ಪಟುವಿಗೆ ಕ್ರೀಡಾ ರತ್ನ ಪ್ರಶಸ್ತಿ

ಹಳಿಯಾಳ: ಬೆಂಗಳೂರಿನಲ್ಲಿ ಸೋಮವಾರ ಆಯೋಜಿಸಿದ್ದ ಸಮಾರಂಭದಲ್ಲಿ 2020-21ನೇ ಸಾಲಿನ ಕ್ರೀಡಾ ರತ್ನ ಪ್ರಶಸ್ತಿಗೆ ಭಾಜನವಾಗಿರುವ ಹಳಿಯಾಳ ತಾಲೂಕಿನ ಅರ್ಲವಾಡ ಗ್ರಾಮದ ಅಂತಾರಾಷ್ಟ್ರೀಯ ಕುಸ್ತಿಪಟು ಸೂರಜ್ ಸಂಜು ಅನ್ನಿಕೇರಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಸೂರಜ್ ಅನ್ನಿಕೇರಿ ಹಳಿಯಾಳದ ಕ್ರೀಡಾ ವಸತಿ ನಿಲಯದ ವಿದ್ಯಾರ್ಥಿಯಾಗಿದ್ದು, ಸದ್ಯ ಬಳ್ಳಾರಿಯ ಜೆಎಸ್​ಡಬ್ಲ್ಯು ತೊರಂಗಲ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿದ್ದಾನೆ.