ಹುಲಿಯೂರುದುರ್ಗ: ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ಹಳೆವೂರು ಗ್ರಾಮದ ರಸ್ತೆಯಲ್ಲಿ ಭಾನುವಾರ ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ನಿಂಗಿಕೊಪ್ಪಲು ಗ್ರಾಮದ ಸತೀಶ್ (30) ಮೃತಪಟ್ಟಿದ್ದಾನೆ. ಗಾಯಗೊಂಡಿದ್ದ ಸತೀಶ್ನನ್ನು ಸ್ಥಳಿಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ಳೂರು ಕ್ರಾಸ್ನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಸತೀಶ್ ಮೃತಪಟ್ಟಿದ್ದಾರೆ.
ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.