ಜಿಲ್ಲೆ

ಹಳೇ ಪಿಂಚಣಿ ವ್ಯವಸ್ಥೆ ಮುಂದುವರಿಸುವಂತೆ ಸೌತ್ ವೆಸ್ಟರ್ನ್ ರೈಲ್ವೆ ಮಜ್ದೂರ್ ಯೂನಿಯನ್ ನಿಂದ ಪ್ರತಿಭಟನೆ

ಮೈಸೂರು: ಹಳೇ ಪಿಂಚಣಿ ವ್ಯವಸ್ಥೆಯನ್ನೇ ಮುಂದುವರಿಸಬೇಕು ಎಂದು ಒತ್ತಾಯಿಸಿ ಸೌತ್ ವೆಸ್ಟರ್ನ್ ರೈಲ್ವೆ ಮಜ್ದೂರ್ ಯೂನಿಯನ್ ವತಿಯಿಂದ ರೈಲ್ವೆ ವರ್ಕ್‌ಶಾಪ್ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಕೇಂದ್ರ ಸರ್ಕಾರ ಹಳೇ ಪಿಂಚಣಿ ನಿಯಮ ರದ್ದುಗೊಳಿಸಿ ಹೊಸ ಪಿಂಚಣಿ ನಿಯಮ ತರಲು ಮುಂದಾಗಿರುವುದು ಸರಿಯಲ್ಲ. ಇದರಿಂದ ನೌಕರರಿಗೆ ತುಂಬ ತೊಂದರೆಯಾಗುತ್ತದೆ. ಹೀಗಾಗಿ ಹಳೇ ಪಿಂಚಣಿ ವ್ಯವಸ್ಥೆಯನ್ನೇ ಮುಂದುವರಿಸಬೇಕು. ಯಾವುದೇ ಕಾರಣಕ್ಕೂ ಹೊಸ ಪಿಂಚಣಿ ವ್ಯವಸ್ಥೆ ಜಾರಿ ಮಾಡಬಾರದು. ಇಲ್ಲವಾದರೆ ಪಾರ್ಲಿಮೆಂಟ್ ಚಲೋ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಯೂನಿಯನ್ ಅಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ಯತಿರಾಜ್, ಪದಾಧಿಕಾರಿಗಳು, ರೈಲ್ವೆ ವರ್ಕ್ ಶಾಪ್‌ನ ನೌಕರರು ಇದ್ದರು.