ತುಮಕೂರು : ಜಿಲ್ಲೆಯಲ್ಲಿ ಕರೊನಾ ಸೋಂಕಿತರಿಗೆ ಚಿಕಿತ್ಸೆ ಸಿಗದ ದುಸ್ಥಿತಿ ಎದುರಾಗಿದ್ದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಸರಣಿ ಸಭೆ ಮುಂದುವರಿದಿದೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ತಾಲೂಕು ಅಧಿಕಾರಿಗಳ ಜತೆ ಸಭೆ ನಡೆಸಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಧುಸ್ವಾಮಿ ತಿಳಿದುಕೊಂಡರು.
ಜಿಲ್ಲೆಯಲ್ಲಿ ಬೆಡ್ ಹಾಗೂ ಆಮ್ಲಜನಕದ ಸಮಸ್ಯೆ ಎದುರಾಗಿರುವ ಹಿನ್ನೆಲೆಯಲ್ಲಿ ಸಾವಿನ ಸಂಖ್ಯೆ ಹೆಚ್ಚಳವಾಗಿದ್ದು, ಜನರು ವ್ಯವಸ್ಥೆ ಮೇಲೆ ಆಕ್ರೋಶಗೊಂಡಿದ್ದಾರೆ. ಬದುಕುವ ವಿಶ್ವಾಸವನ್ನೇ ಕಳೆದುಕೊಂಡು ಜನಾಕ್ರೋಶ ಎದುರಾಗಿರುವ ಹಿನ್ನೆಲೆಯಲ್ಲಿ ಸಭೆಗಳು ಮುಂದುವರಿದಿದ್ದು ಲಶ್ರುತಿ ಇಲ್ಲದಂತಾಗಿದೆ.
ಕರೊನಾ ಸೋಂಕು ನಿಯಂತ್ರಣ ಹಾಗೂ ಚಿಕಿತ್ಸೆಯಲ್ಲಿ ಜಿಲ್ಲಾಡಳಿತ ವಿಲವಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಸಭೆಯಲ್ಲಿ ಅಧಿಕಾರಿಗಳ ಕಾರ್ಯವೈಖರಿಗೆ ಸಚಿವರು ಗರಂ ಆದರು. ಹಳ್ಳಿಗಳಲ್ಲಿ ಸೋಂಕು ವ್ಯಾಪಕವಾಗುವುದಕ್ಕೆ ಕಡಿವಾಣ ಹಾಕಬೇಕು. ಹಾಗಾಗಿ, ಹೋಂ ಕ್ವಾರಂಟೈನ್‌ನಲ್ಲಿರುವ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್‌ಗೆ ಸ್ಥಳಾಂತರಿಸಬೇಕು ಎಂದು ಸೂಚಿಸಿದರು.
ಆರ್ ಟಿಪಿಸಿಆರ್ ವರದಿ ಇಲ್ಲದೇ ಜ್ವರ, ನೆಗಡಿ, ಕೆಮ್ಮು ಸೇರಿದಂತೆ ಇತರ ಕಾಯಿಲೆಗಳಿಗೆ ವೈದ್ಯಕೀಯ ಸೇವೆ ನೀಡುತ್ತಿರುವ ಆಸ್ಪತ್ರೆಗಳನ್ನು ಕಡ್ಡಾಯವಾಗಿ ಬಂದ್ ವಾಡಬೇಕು ಎಂದು ಎಲ್ಲ ತಾಲೂಕು ತಹಸೀಲ್ದಾರ್‌ಗಳಿಗೆ ನಿರ್ದೇಶಿಸಿದರು.
ಕುಣಿಗಲ್ ಶಾಸಕ ಡಾ.ಎಚ್.ಡಿ.ರಂಗನಾಥ್ ಮಾತನಾಡಿ, ಆಕ್ಸಿಜನ್ ಮತ್ತು ರೆಮ್‌ಡಿಸಿವಿರ್ ಕೊರತೆಯಾಗಿದ್ದು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೆ ಸಾವಿನ ಸಂಖ್ಯೆ ಹೆಚ್ಚಾಗಿದೆ, ಜಿಲ್ಲಾ ಮಟ್ಟದ ಅಧಿಕಾರಿಗಳು ಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು.
ಶಿರಾ ಶಾಸಕ ಡಾ.ರಾಜೇಶ್‌ಗೌಡ ಮಾತನಾಡಿ, ಆರ್‌ಟಿಪಿಸಿಆರ್ ವರದಿ ತಡವಾಗಿ ಬರುತ್ತಿದ್ದು ಇದರಿಂದ ಸೋಂಕಿತರು ವರದಿ ಬರುವಷ್ಟರಲ್ಲಿ ಗಂಭೀರ ಸ್ಥಿತಿಗೆ ತಲುಪುತ್ತಿದ್ದಾರೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಕೋವಿಡ್ ವರದಿ ವಿಳಂಬವಾಗುತ್ತಿದ್ದ ಸಮಸ್ಯೆಯನ್ನು ಸರಿಪಡಿಸಲಾಗಿದ್ದು, 24 ಗಂಟೆಯೊಳಗೆ ವರದಿ ಬರುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ತುಮಕೂರು ಹೊರತುಪಡಿಸಿದರೆ ಶಿರಾ ತಾಲೂಕಿನಲ್ಲಿಯೇ ಪ್ರಕರಣಗಳು ಹೆಚ್ಚುತ್ತಿವೆ. ಹಾಗಾಗಿ, ನಿಯಂತ್ರಣಕ್ಕೆ ಹೆಚ್ಚು ಕ್ರಮ ಕೈಗೊಳ್ಳಲಾಗಿದೆ ಎಂದು ಭರವಸೆ ನೀಡಿದರು.
ತಿಪಟೂರು ಶಾಸಕ ಬಿ.ಸಿ.ನಾಗೇಶ್ ಮಾತನಾಡಿ, ಪ್ರಕರಣಗಳು ಹೆಚ್ಚುತ್ತಿದ್ದು, ಆಕ್ಸಿಜನ್ ಪೂರೈಕೆಯನ್ನು ಇನ್ನಷ್ಟು ಹೆಚ್ಚಿಸಬೇಕು, ಹಾಸಿಗೆ ವ್ಯವಸ್ಥೆಯನ್ನು ನಾವೇ ವಾಡಿಕೊಳ್ಳುತ್ತೇವೆ, ತಿಪಟೂರು ತಾಲೂಕಿಗೆ ಹೆಚ್ಚುವರಿ 50 ಹಾಸಿಗೆಗಳ ವ್ಯವಸ್ಥೆ ವಾಡುವ ಬಗ್ಗೆ ಮನವಿ ವಾಡಲಾಗಿತ್ತು. ಈವರೆಗೂ ಹಾಸಿಗೆಗಳ ವ್ಯವಸ್ಥೆ ಆಗಿಲ್ಲ ಎಂದು ಅಸಮಧಾನ ಹೊರಹಾಕಿದರು.
ತುಮಕೂರು, ತಿಪಟೂರು, ಶಿರಾ ತಾಲೂಕಿನ ಆಸ್ಪತ್ರೆಗಳಿಗೆ 50 ಹಾಸಿಗೆಗಳ ವ್ಯವಸ್ಥೆ ವಾಡಲು ತೀರ್ವಾನ ವಾಡಲಾಗಿದ್ದು, 50 ಹಾಸಿಗೆಗಳಿಗೂ ಸಮರ್ಪಕವಾಗಿ ಆಕ್ಸಿಜನ್ ಪೂರೈಕೆಯಾದಾಗ ಹಾಸಿಗೆಗಳ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಮಾಧುಸ್ವಾಮಿ ಭರವಸೆ ನೀಡಿದರು.
ಸಂಸದ ಜಿ.ಎಸ್.ಬಸವರಾಜು ಮಾತನಾಡಿ, ಗುಬ್ಬಿ ತಾಲೂಕಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿರುವ ಕಡೆ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಿ, ಸೋಂಕಿತರನ್ನು ಕೋವಿಡ್ ಕೇರ್‌ಗೆ ಸ್ಥಳಾಂತರಿಸಬೇಕು. ಹೋಬಳಿವಾರು ಕೋವಿಡ್ ಕೇರ್ ಸೆಂಟರ್ ಸ್ಥಾಪಿಸುವುದು ಉತ್ತಮ ಎಂದರು.
ಸಭೆಯಲ್ಲಿ ಜಿಪಂ ಸಿಇಒ ಕೆ.ವಿದ್ಯಾಕುವಾರಿ, ಉಪವಿಭಾಗಾಧಿಕಾರಿ ಅಜಯ್, ಡಿಎಚ್‌ಒ ಡಾ.ನಾಗೇಂದ್ರಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸುರೇಶ್ ಬಾಬು, ಪಾಲಿಕೆ ಆಯುಕ್ತೆ ರೇಣುಕಾ ಇದ್ದರು.
ಸಮರ್ಪಕ ಪರೀಕ್ಷೆ ಮಾಡಿ: ಎಲ್ಲ ಆಕ್ಸಿಜನ್ ಲೈನ್‌ಗಳನ್ನು ಸಮರ್ಪಕ ಪರೀಕ್ಷೆ ವಾಡಬೇಕು, ಆಕ್ಸಿಜನ್ ಖಾಲಿಯಾಗುವವರೆಗೂ ಕಾಯಬಾರದು. ಶೇ.25 ಖಾಲಿಯಾದ ತಕ್ಷಣ ಅದನ್ನು ಭರ್ತಿ ವಾಡಲು ಕ್ರಮ ಕೈಗೊಳ್ಳಬೇಕು. ಅನಗತ್ಯವಾಗಿ ಆಕ್ಸಿಜನ್ ಬಳಕೆ ವಾಡಬಾರದು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು.
ಗೈಡ್‌ಲೈನ್‌ನಂತೆಯೇ ಸೋಂಕಿತರಿಗೆ ಆಕ್ಸಿಜನ್ ಮತ್ತು ರೆಮ್‌ಡಿಸಿವಿರ್ ಕೊಡಬೇಕು, ಅನಗತ್ಯವಾಗಿ ಆಕ್ಸಿಜನ್ ಕೊರತೆಯಾಗಿ ಸಮಸ್ಯೆ ಉಂಟಾಗಿ ದೂರುಗಳು ಕೇಳಿಬಂದರೆ ತಾಲೂಕು ಕಾರ್ಯಪಡೆಯನ್ನೇ ಹೊಣೆ ವಾಡಿ ಕ್ರಮ ಜರುಗಿಸಲಾಗುವುದು ಎಂದರು.