ಜಿಲ್ಲೆ

ಹಳ್ಳಿಮೈಸೂರು ಹೋಬಳಿಯ ಗ್ರಾಮದಲ್ಲಿ ಕೃಷ್ಣೇಗೌಡರಿಂದ ಭರ್ಜರಿ ಪ್ರಚಾರ

ಅರಕಲಗೂಡು:  ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪ್ರಗತಿಪರ ರೈತ ಕೃಷ್ಣೇಗೌಡರು ಗುರುವಾರ ಕ್ಷೇತ್ರದ ಹಲವು ಹಳ್ಳಿಗಳಿಗೆ ಭೇಟಿ ನೀಡಿ ಭರ್ಜರಿ ಪ್ರಚಾರ ನಡೆಸಿದರು.

ಗಳಾದ ಮೂಡಲಮಾಯನಗೌಡನಹಳ್ಳಿ, ರಾಗಿಹಳ್ಳಿ ಕಾವಲು, ಬಾಚನಹಳ್ಳಿ,ದೊಡ್ಡ ಕಾಡುನೂರು, ಚಿಕ್ಕ ಕಾಡನೂರು ಸೇರಿಂದತೆ ಹಲವು ಹಳ್ಳಿಗಳಿಗೆ ಭೇಟಿ ನೀಡಿ ಪ್ರಚಾರ ನಡೆಸಿ. ನನ್ನ ಜೋಡಿ ತಂಗಿನ ಮರದ ಗುರುತಿಗೆ ತಮ್ಮ ಮತವನ್ನು ನೀಡಬೇಕು ಎಂದು ಮನವಿ ಮಾಡಿದರು.

ಅರಕಲಗೂಡು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನ ಕಟ್ಟಿ ಬೆಳೆಸಲು ಶ್ರಮಿಸಿದೆ.ಆದರೆ ಪಕ್ಷದ ನಾಯಕರು ನನ್ನನ್ನ ಮತ್ತು ನನ್ನ ಕೆಲಸ ಕಾರ್ಯಗಳನ್ನು ಗುರುತಿಸಿ ಟಿಕೆಟ್ ನೀಡಲಿಲ್ಲ. ಆದ್ದರಿಂದ ಕಾರ್ಯಕರ್ತರು, ಮುಖಂಡರು, ಅಭಿಮಾನಿಗಳ ಒತ್ತಾಯದ ಮೇರೆಗೆ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದೇನೆ. ನಿಮಗಳ ಸಹಕಾರದಿಂದ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.

ಕ್ಷೇತ್ರದಲ್ಲಿ ಹಲವು ಮೂಲಭೂತ ಸಮಸ್ಯೆಗಳಿದ್ದು, ಅವುಗಳನ್ನ ಪ್ರಾಮಾಣಿಕವಾಗಿ ಬಗೆಹರಿಸಲಾಗುವುದು. ಶಿಕ್ಷಣ, ಉದ್ಯೋಗ, ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತಂದು. ಇಡೀ ರಾಜ್ಯದಲ್ಲಿ ಮಾದರಿ ಕ್ಷೇತ್ರವನ್ನಾಗಿ ಮಾಡುವುದಾಗಿ ಭರವಸೆ ನೀಡಿದರು.

ನಾನು ಈ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಸಮಾಜಸೇವೆ ಮಾಡಿಕೊಂಡು, ಜನರ ಮಧ್ಯೆ ಇದ್ದುಕೊಂಡು ಕೆಲಸ ಮಾಡಿಕೊಂಡು ಬಂದಿದ್ದೇನೆ. ಮುಂದಿನ ದಿನಗಳು ಕೂಡ ನಿಮ್ಮ ಜೊತೆ, ನಿಮ್ಮ ಧ್ವನಿಯಾಗಿ ಕೆಲಸ ಮಾಡುತ್ತೇನೆ.ಹೆಚ್ಚಿನ ಮತಗಳ ಅಂತರದಿಂದ ನನ್ನನ್ನ ಗೆಲ್ಲಿಸಲು ನೀವೆಲ್ಲರೂ ಸಹಕರಿಸಬೇಕು ಎಂದು ವಿನಂತಿಸಿದರು.

ಕೃಷ್ಣೆಗೌಡರು ಹಳ್ಳಿ ಮೈಸೂರು ಹೋಬಳಿಯ ಸುತ್ತಮುತ್ತಲಿನ ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರನ್ನ ಆತ್ಮೀಯವಾಗಿ ಸ್ವಾಗತಿಸಲಾಯಿತು.ಅಲ್ಲದೆ ಗ್ರಾಮಸ್ಥರು ನಿಮಗೆ ನಮ್ಮ ಸಂಪೂರ್ಣ ಬೆಂಬಲ ಇರುವುದಾಗಿ ಸೂಚಿಸಿದರು.