ಚಿಕ್ಕಮಗಳೂರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ ಒಂದೇ ಮಾತರಂ ಟ್ರಸ್ಟ್ ಪದಾಧಿಕಾರಿಗಳು ಹಸುವಿನ ಮೇಲೆ ವಿಕೃತಿ ಮೆರೆದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. 
ಜಿಲ್ಲೆ

ಹಸುವಿನ ಮೇಲೆ ವಿಕೃತಿ ಮೆರೆದವರ ವಿರುದ್ಧ ಕ್ರಮ ಕೈಗೊಳ್ಳಿ

ಚಿಕ್ಕಮಗಳೂರು: ನಗರದ ವಿಜಯಪುರ ಬಡಾವಣೆಯಲ್ಲಿ ಬೀಡಾಡಿ ಗೋವಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ವಂದೇ ಮಾತರಂ ಟ್ರಸ್ಟ್ ಪದಾಧಿಕಾರಿಗಳು ಸೋಮವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಗೋವಿಗೆ ಸೆಂಟ್ ಸ್ಪೆö್ರÃ ಮಾಡಿ ಬೆಂಕಿ ಹಚ್ಚಿ ವಿಕೃತಿ ಮರೆಯಲಾಗಿದೆ. ಈ ಮೂಲಕ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಕೆಲಸವನ್ನು ಕಿಡಿಗೇಡಿಗಳು ಮಾಡಿದ್ದಾರೆ. ಇದನ್ನು ಪ್ರತಿಭಟಿಸಿದ ಸ್ಥಳೀಯರ ಮೇಲೆ ಮೊಕ್ಕದ್ದಮೆ ದಾಖಲಿಸಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಸುವಿನ ಮೇಲೆ ವಿಕೃತಿ ಮೆರೆದಿರುವ ಕಿಡಿಗೇಡಿಗಳು ಅಪ್ರಾಪ್ತರಾದರು ಬಿಡದೆ ಅವರ ಮೇಲೆ ಪ್ರಕರಣ ದಾಖಲಿಸಿ ಶಿಕ್ಷೆ ವಿಧಿಸಬೇಕು. ಜಿಲ್ಲೆಯಲ್ಲಿ ಅನವಶ್ಯಕವಾಗಿ ಹಿಂದೂಗಳ ಭಾವನೆಗೆ ಧಕ್ಕೆ ತರುವ ಮೂಲಕ ಸಮಾಜದ ಸ್ವಾಸ್ಥö್ಯ ಹಾಳು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಟ್ರಸ್ಟ್ ಪ್ರಮುಖರಾದ ಪ್ರೀತೀಶ್, ಪಾರ್ವತಮ್ಮ, ವಿಜಯಶ್ರೀ, ಕಲಾ, ಶುಭಶ್ರೀ, ಮಾಲಾ ರಮೇಶ್ ಮತ್ತಿತರರಿದ್ದರು.