ಜಿಲ್ಲೆ

ಹಾಡುಹಗಲೇ ಮಹಿಳೆಯ ಕತ್ತು ಸೀಳಿ ಕೊಲೆ

ಹೊಳೆನರಸೀಪುರ: ತಾಲೂಕಿನ ಗಂಗೂರು ಗ್ರಾಮದಲ್ಲಿ ಹಾಡುಹಗಲೇ ಮಹಿಳೆಯ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ನಡೆದಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ.       

       ತಾಲೂಕಿನ ಗಂಗೂರು ಗ್ರಾಮದ ರಾಜೇಗೌಡ ಎಂಬುವರ ಪತ್ನಿ ಪಾರ್ವತಮ್ಮ(58) ಹತ್ಯೆಗೀಡಾದ ದುರ್ಧೈವಿ ಮಹಿಳೆ.

ಶುಕ್ರವಾರ ಪತಿ ರಾಜೇಗೌಡ ಬೆಂಗಳೂರಿಗೆ ತೆರಳಿದ್ದ ಕಾರಣ ಮನೆಯಲ್ಲಿ ಒಬ್ಬರೇ ಇದ್ದರು ಎನ್ನಲಾಗಿದೆ. ಶನಿವಾರ ಬೆಳಗ್ಗೆ 10 ಗಂಟೆಯ ಸುಮಾರಿನಲ್ಲಿ ತೋಟದ ಮನೆಯಲ್ಲಿ ಪಾರ್ವತಮ್ಮ ಅವರು ಒಬ್ಬರೇ ಇದ್ದಾಗ ಕಿರಾತಕರಿಂದ ಬರ್ಭರವಾಗಿ ಹತ್ಯೆಯಾಗಿದ್ದಾರೆ. ಶ್ರೀ ಧರ್ಮಸ್ಥಳ ಸ್ವಸಹಾಯ ಸಂಘದ ಮಹಿಳೆಯರು ಸಂಘದ ವಿಚಾರದಲ್ಲಿ ಮನೆಗೆ ಭೇಟಿ ನೀಡಿದಾಗ ಕೃತ್ಯ ಬೆಳಕಿಗೆ ಬಂದಿದೆ ಮತ್ತು ಮಾಸ್ಕ್ ಧರಿಸಿದ್ದ ಇಬ್ಬರು ವ್ಯಕ್ತಿಗಳು ದ್ವಿಚಕ್ರ ವಾಹನದಲ್ಲಿ ತೆರಳಿದ್ದನ್ನು ಗ್ರಾಮಸ್ಥರು ನೋಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಪ್ರಕರಣ ಸಂಬAಧ ಡಿವೈಎಸ್ಪಿ, ವೃತ್ತ ನಿರೀಕ್ಷಕರು, ಗ್ರಾಮಾಂತರ ಹಾಗೂ ನಗರ ಪೊಲೀಸ್ ಠಾಣೆ ಪಿಎಸ್ಸೆöÊ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ತನಿಖೆ ಪ್ರಾರಂಭಿಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.