ಜಿಲ್ಲೆ

ಹಾವು ಕಚ್ಚಿ ರೈತ ಮಹಿಳೆ ಸಾವು

ಎಚ್.ಡಿ.ಕೋಟೆ: ತಾಲೂಕಿನ ಗೆಂಡತ್ತೂರು ಗ್ರಾಮದಲ್ಲಿ ಶುಕ್ರವಾರ ಹಾವು ಕಚ್ಚಿ ರೈತ ಮಹಿಳೆ ಮೃತಪಟ್ಟಿದ್ದಾರೆ.


ಗ್ರಾಮದ ವೆಂಕಟೇಗೌಡ ಪತ್ನಿ ಭಾಗ್ಯಾ(28) ಮೃತರು. ಶುಕ್ರವಾರ ಮಧ್ಯಾಹ್ನ ಜಮೀನಿನ ಕೆಲಸಕ್ಕೆ ಬಂದಿದ್ದ ಕೂಲಿ ಕಾರ್ಮಿಕರಿಗೆ ಜಮೀನಿನ ಶೆಡ್‌ನಲ್ಲಿ ಅಡುಗೆ ಮಾಡುತ್ತಿದ್ದರು. ಈ ವೇಳೆ ಇವರ ಕಾಲಿಗೆ ನಾಗರಹಾವು ಕಚ್ಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡರು.


ತಕ್ಷಣ ತಾಲೂಕಿನ ಎನ್.ಬೇಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು. ಮರಣೋತ್ತರ ಪರೀಕ್ಷೆ ನಂತರ ವಾರಸುದಾರರಿಗೆ ಶವ ಒಪ್ಪಿಸಲಾಯಿತು. ಅಂತರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.