ಹಾಸನ: ವರ್ಷಕ್ಕೊಮ್ಮೆ ಬಾಗಿಲು ತೆರೆಯುವಂತಹ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ನಿನ್ನ ಕೆಲವೇ ದಿನಗಳು ಬಾಕಿ ಉಳಿದಿದ್ದು, ಈಗಾಗಲೇ ಸಿದ್ಧತಾ ಕಾರ್ಯಗಳು ಬರದಿಂದ ಸಾಗಿದೆ.
ಈ ಬಾರಿ ಅ.24 ರಿಂದ ನ.03 ವರಗೆ 11 ದಿನಗಳ ಕಾಲ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಆದರೆ ಮೊದಲನೇ ದಿನ ಮತ್ತು ಕೊನೆಯ ದಿನ ಸಾರ್ವಜನಿಕರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಇನ್ನುಳಿದಂತೆ 9ದಿನಗಳ ಕಾಲ ದಿನದ 24 ಗಂಟೆಗೆ ಕಾಲ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಮಾಡಿ ಕೊಡಲಾಗಿದೆ. ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಜಾತ್ರಾ ಮಹೋತ್ಸವದ ಸಿದ್ಧತಾ ಕಾರ್ಯಗಳು ನಡೆಯುತ್ತಿವೆ.
ಈಗಾಗಲೇ ನಗರದ ಹೊರಭಾಗದಲ್ಲಿ ರಸ್ತೆಗಳ ದುರಸ್ತಿ ಕಾರ್ಯ, ದೇವಸ್ಥಾನದ ಸುತ್ತಮುತ್ತಲಿನ ಸ್ವಚ್ಛತೆ, ಚರಂಡಿ, ರಸ್ತೆ ಮತ್ತು ರಸ್ತೆಯ ವಿಭಜಕ್ಕೆ ಬಣ್ಣ ಹೊಡೆಯುವ ಕಾರ್ಯವು ಕೂಡ ನಡೆಯುತ್ತಿದೆ. ಇದಲ್ಲದೆ ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಅವರ ಅನುಕೂಲಕ್ಕಾಗಿ ಜರ್ಮನ್ ಟೆಂಟ್ ನಿರ್ಮಾಣ ಕಾರ್ಯ ಆರಂಭಗೊಂಡಿದೆ.
ದೇವಸ್ಥಾನದ ಒಳಭಾಗದಲ್ಲಿ ಸ್ವಚ್ಛತಾ ಕಾರ್ಯಗಳು ನಡೆಯುತ್ತಿದ್ದು, ನಗರದಾದ್ಯಂತ ದೀಪಾಲಂಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಕಳೆದ ಬಾರಿ ದೇವಿಯ ದರ್ಶನಕ್ಕೆ ದಾಖಲೆಯ ಜನರು ಆಗಮಿಸಿದ್ದರು. ಈ ಬಾರಿಯೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತ ಮುಂಜಾಗ್ರತ ಕ್ರಮಗಳನ್ನು ಅನುಸರಿಸುತ್ತಿದೆ.
ಬರುವಂತಹ ಭಕ್ತಾದಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಪಾಕಿರ್ಂಗ್ ವ್ಯವಸ್ಥೆ, ಮಳೆ ಮತ್ತು ಬಿಸಿಲಿನ ತಾಪಕ್ಕೆ ಜನರು ಬಸವಲಿಯದಂತೆ ಟೆಂಟ್ ವ್ಯವಸ್ಥೆ ಮಾಡಲಾಗುತ್ತಿದೆ. ಇದಲ್ಲದೇ ರಸ್ತೆಯ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದಂತಹ ಬೀದಿಬದಿ ವ್ಯಾಪಾರಸ್ಥರು, ಗೂಡು ಅಗಡಿಗಳನ್ನು ನಗರಸಭೆ ವತಿಯಿಂದ ತೆರವು ಮಾಡಲಾಗಿದೆ.