ಹಾಸನ: ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠೆ ಅಂಗವಾಗಿ ಕನ್ನಡದ ನಂಬರ್ ಒನ್ ಪತ್ರಿಕೆ ವಿಜಯವಾಣಿ ವಿಶೇಷ ಸಂಚಿಕೆ ರಾಮೋತ್ಸವ ಪುರವಾಣಿಯನ್ನ ಸೋಮವಾರ ನಗರದ ಬಸಟ್ಟಿ ಕೊಪ್ಪಲಿನ ಅಂಬಾರಿ ಗೆಳೆಯರ ಬಳಗ ಮತ್ತು ವಿನಾಯಕರ ಗೆಳೆಯರ ಬಳಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹಿಮ್ಸ್ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಲೋಕೇಶ್ ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಅವರು ವಿಜಯವಾಣಿ ಪತ್ರಿಕೆ ಇಂತಹ ಸುಸಂದರ್ಭದಲ್ಲಿ ವಿಶೇಷ ಸಂಚಿಕೆಯನ್ನು ಹೊರ ತರುವ ಮೂಲಕ ಓದುಗರಿಗೆ ಉತ್ತಮ ಮಾಹಿತಿಯನ್ನು ನೀಡಿದ್ದಾರೆ. ಆ ಬಳಗಕ್ಕೆ ತುಂಬು ಹೃದಯದ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ವಿನಾಯಕ ಗೆಳೆಯರ ಬಳಗದ ಶಿವು, ಶರತ್, ಕಿರಣ್, ಶ್ರೀಕಾಂತ್, ನಾಗರಾಜ್, ನಂದಿ, ಮುರುಳಿ, ಆಶೋಕ್, ಮಂಜುನಾಥ್ ಸೇರಿದಂತೆ ಇನ್ನಿತರರು ಇದ್ದರು.
ಅದೇ ರೀತಿ ಹಾಸನಂಬ ಆಸ್ಪತ್ರೆಯ ನಿರ್ದೇಶಕ ಡಾ.ಬಸವರಾಜ್ ಅವರು ತಮ್ಮ ಆಸ್ಪತ್ರೆಯಲ್ಲಿ ವಿಶೇಷ ಪುರವಣಿಯನ್ನ ಬಿಡುಗಡೆ ಮಾಡಿ ಮಾತನಾಡಿದ ಅವರು ರಾಮನ ಕುರಿತಾದಂತಹ ಮಾಹಿತಿ ಹಾಗೂ ಪ್ರಸ್ತುತ ಸಂದರ್ಭದಲ್ಲಿ ಅಯೋಧ್ಯೆಯ ಬಗ್ಗೆ ಸಾಕಷ್ಟು ವಿಚಾರವನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ವಿಶೇಷ ಸಂಚಿಕೆಯನ್ನು ಹೊರತಂದಿದ್ದಾರೆ ಅವರಿಗೆ ಶುಭವಾಗಲಿ ಎಂದು ಹಾರೈಸಿದರು ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಬೊಮ್ಮೇಗೌಡ ಇದ್ದರು