ಮೈಸೂರು: ಜಿಲ್ಲೆಯಲ್ಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ (ಸಾಮಾನ್ಯ ಪದವಿ ಕೋರ್ಸ್‌ನ ವಿದ್ಯಾರ್ಥಿಗಳಿಗೆ ಮಾತ್ರ) ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, ಎಸ್‌ಸಿ, ಎಸ್‌ಟಿ ಮತ್ತು ಇತರ ವಿವಿಧ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಂದ 2023-24 ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ.
www.bcwd.karnataka.gov.in, www.bcwd.karnataka.gov.inವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಲು ಆ.16 ಅಂತಿಮ ದಿನವಾಗಿದೆ. ಮಾಹಿತಿಗೆ bcwd.hostel@karnataka.gov.in, bcwd.hostel@karnataka.gov.in
ಅಥವಾ ದೂ. 80503 70005 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಪೋಸ್ಟ್‌ಮೆಟ್ರಿಕ್ ಹಾಸ್ಟೆಲ್‌ಗೆ ಪ್ರವೇಶ
2023-24ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ (ಸಾಮಾನ್ಯ ಪದವಿ ಕೋರ್ಸ್‌ನ ವಿದ್ಯಾರ್ಥಿಗಳಿಗೆ ಮಾತ್ರ) ಬಾಲಕ ಮತ್ತು ಬಾಲಕಿ ವಿದ್ಯಾರ್ಥಿನಿಲಯಗಳ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, ಎಸ್‌ಸಿ, ಎಸ್‌ಟಿ ಮತ್ತು ಇತರ ವಿವಿಧ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಂದ sw.kar.nic.in ವೆಬ್‌ಸೈಟ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಕೆಗೆ ಆ.16 ಕೊನೆಯ ದಿನಾಂಕವಾಗಿದ್ದು, ಮಾಹಿತಿಗಾಗಿ ದೂ. 0821-2520910 ಸಂಪರ್ಕಿಸಬಹುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಸೈನಿಕ ಮಂಡಳಿಯಲ್ಲಿ ಸ್ವಯಂ ಸೇವೆ
ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ವ್ಯಾಪ್ತಿಯ ಮಾಜಿ ಸೈನಿಕರು ಜಿಲ್ಲಾ ಸೈನಿಕ ಮಂಡಳಿಯಲ್ಲಿ ವೇತನ, ಭತ್ಯೆ ರಹಿತವಾಗಿ ಸ್ವಇಚ್ಛೆಯಿಂದ ಕಾರ್ಯನಿರ್ವಹಿಸಲು ಆಸಕ್ತಿಯುಳ್ಳವರು ಆ.2ರೊಳಗಾಗಿ ಸ್ವವಿವರದೊಂದಿಗೆ ಅರ್ಜಿಯನ್ನು ಮೈಸೂರಿನ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಮಾಹಿತಿಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ದೂ.08212-2425240 ಸಂಪರ್ಕಿಸಬಹುದು.
ಪಪಂನಿಂದ ವಿವಿಧ ಸೌಲಭ್ಯ
ಬನ್ನೂರು ಪುರಸಭೆಯ 2023-24 ನೇ ಸಾಲಿನ ಎಸ್‌ಎಫ್‌ಸಿ ಮುಕ್ತನಿಧಿ ಹಾಗೂ ಪಟ್ಟಣ ಪಂಚಾಯಿತಿ ಅನುದಾನದಲ್ಲಿ ಎಸ್‌ಸಿ, ಎಸ್‌ಟಿಯ ಶೇ.24.10, ಇತರ ಹಿಂದುಳಿದ ವರ್ಗಗಳಿಗೆ ಶೇ.7.25, ಅಂಗವಿಕಲರಿಗೆ ಶೇ.5 ಪುರಸಭೆ ಸಾಮನ್ಯ ನಿಧಿಯ ವಿವಿಧ ಯೋಜನೆಗಳಿಗೆ ವೈಯುಕ್ತಿಕ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 20 ಕೊನೆಯ ದಿನಾಂಕವಾಗಿದ್ದು, ಸಂಬಂಧಿಸಿದ ದಾಖಲೆಗಳೊಂದಿಗೆ ಪಟ್ಟಣ ಪಂಚಾಯಿತಿ ಕಾರ್ಯಲಯಕ್ಕೆ ಸಲ್ಲಿಸುವಂತೆ ತಿಳಿಸಿಲಾಗಿದೆ. ಮಾಹಿತಿಗೆ ಯೋಜನಾ ಶಾಖೆಯನ್ನು ಸಂಪರ್ಕಿಸುವಂತೆ ಬನ್ನೂರು ಪಪಂ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.