ಜಿಲ್ಲೆ

ಹಾಸ್ಟೆಲ್ ವಿದ್ಯಾರ್ಥಿ ಸಾವು ಪ್ರಕರಣ

ಕಿರಣ್ ಮಾದರಹಳ್ಳಿ

ಗುಂಡ್ಲುಪೇಟೆ: ತಾಲೂಕಿನ ಯಡವನಹಳ್ಳಿ ಗ್ರಾಮದ ಮುರಾರ್ಜಿ ವಸತಿ ಶಾಲೆಯ ಹಾಸ್ಟೆಲ್ ಕಾಂಪೌಂಡ್ ಹತ್ತುವಾಗ ಕಾಲು ಜಾರಿ ಕೆಳಗೆ ಬಿದ್ದು ವಿದ್ಯಾರ್ಥಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದ ಮೇಲೆ ಹಾಸ್ಟೆಲ್ ಪ್ರಭಾರ ವಾರ್ಡನ್ ಮತ್ತು ಪ್ರಭಾರ ಪ್ರಾಂಶುಪಾಲೆ ರಾಜೇಶ್ವರಿ ಅವರನ್ನು ಅಮಾನತು ಮಾಡಲಾಗಿದೆ.

ವಿದ್ಯಾರ್ಥಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಂಶುಪಾಲೆ ಅವರನ್ನು ಅಮಾನತು ಮಾಡಲಾಗಿದೆ. ಆದರೆ ಅಮಾನತು ಆದೇಶ ಪ್ರತಿ ಇನ್ನೂ ಕೈ ಸೇರಿಲ್ಲ ಎಂದು ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್‌ಕುಮಾರ್ ವಿಜಯವಾಣಿಗೆ ತಿಳಿಸಿದ್ದಾರೆ.