ಜಿಲ್ಲೆ

ಹಾಸ್ಟೆಲ್‌ಗೆ ಜಿಲ್ಲಾಧಿಕಾರಿ ಭೇಟಿ


ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದ ಸಮಾಜಕಲ್ಯಾಣ ಇಲಾಖೆಯ ಹಾಸ್ಟೆಲ್‌ಗೆ ಜಿಲ್ಲಾಧಿಕಾರಿ ಡಾ.ರಮೇಶ್ ದಿಢೀರ್ ಭೇಟಿ ನೀಡಿ ಮಕ್ಕಳಿಂದ ಕುಂದು ಕೊರತೆಗಳ ಬಗ್ಗೆ ಮಾಹಿತಿ ಪಡೆದರು.


ಶನಿವಾರ ಬೆಳಗ್ಗೆ ಗ್ರಾಮದ ಮೆಟ್ರಿಕ್ ಪೂರ್ವ ಹಾಸ್ಟೆಲ್‌ಗೆ ಡಿಸಿ ಡಾ.ರಮೇಶ್ ಹಾಗೂ ಸಮಾಜಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ದಿಢೀರ್ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಒದಗಿಸುತ್ತಿರುವ ಸವಲತ್ತುಗಳನ್ನು ಪರಿಶೀಲಿಸಿದರು. ಊಟ, ತಿಂಡಿ ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದರು.