ಚಿತ್ರದುರ್ಗ: ಗಣೇಶ ಚತುರ್ಥಿ ಅಂಗವಾಗಿ ಕರುನಾಡಿನಲ್ಲೇ ಪ್ರಸಿದ್ಧಿ ಪಡೆದಿರುವ ಕೋಟೆನಗರಿಯ ಹಿಂದು ಮಹಾಗಣಪತಿ ಮೂರ್ತಿಯನ್ನು ಸೋಮವಾರ ಶಾಸ್ತ್ರೋಕ್ತವಾಗಿ ಜೈನ್‌ಧಾಮದ ಮೈಸೂರು ಅರಮನೆ ಮಾದರಿಯ ಮಂಟಪದೊಳಗೆ ಸೋಮವಾರ ಪ್ರತಿಷ್ಠಾಪಿಸಲಾಯಿತು.
ವಿಶ್ವ ಹಿಂದು ಪರಿಷದ್, ಬಜರಂಗದಳದಿಂದ ಪ್ರತಿಷ್ಠಾಪಿಸಿರುವ ಮೂರ್ತಿಗೆ ಶಿವಶರಣ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಶ್ರೀ ಶಿವಲಿಂಗಾನಂದ ಸ್ವಾಮೀಜಿ ಪೂಜೆ ನೆರವೇರಿಸುವ ಮೂಲಕ ಮಹೋತ್ಸವಕ್ಕೆ ಚಾಲನೆ ನೀಡಿದರು. ನೆರೆದಿದ್ದ ಭಕ್ತರಿಂದ ಹರ್ಷೋದ್ಘಾರ ಮೊಳಗಿದವು.
ಪುರ ಪ್ರವೇಶಿಸಿದ ನಂತರ ಸಾವಿರಾರು ಭಕ್ತರು ಮಹಾಗಣಪನನ್ನು ಕಣ್ತುಂಬಿಕೊಂಡರು. ಶ್ರದ್ಧಾ-ಭಕ್ತಿಯಿಂದ ಕುಟುಂಬದ ಒಳಿತಿಗಾಗಿ ಪ್ರಾರ್ಥಿಸಿದರು.
ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಎಂಎಲ್ಸಿ ಕೆ.ಎಸ್. ನವೀನ್, ಹಿಂದು ಮಹಾಗಣಪತಿ ಉತ್ಸವ ಸಮಿತಿ ಅಧ್ಯಕ್ಷ ಜಿ.ಎಂ.ಸುರೇಶ್, ಮಾರ್ಗದರ್ಶಕ ಬದ್ರಿನಾಥ್, ಬಜರಂಗದಳ ಪ್ರಾಂತ ಸಹ ಸಂಯೋಜಕ ಪ್ರಭಂಜನ್, ವಿಎಚ್‌ಪಿ ಜಿಲ್ಲಾ ಕಾರ್ಯದರ್ಶಿ ಪಿ.ರುದ್ರೇಶ್, ಸಹ ಕಾರ್ಯದರ್ಶಿ ಕೇಶವ್, ಬಜರಂಗದಳ ಜಿಲ್ಲಾ ಸಂಯೋಜಕ ಅಶೋಕ್, ಪದಾಧಿಕಾರಿಗಳಾದ ಶ್ರೀನಿವಾಸ್, ರಂಗಸ್ವಾಮಿ, ಶ್ರೀನಿವಾಸ್ ಡೈರಿ, ನವೀನ್ ಚಾಲುಕ್ಯ, ನಗರಸಭೆ ಸದಸ್ಯ ಶಶಿಧರ್, ಪ್ರಶಾಂತ್ ಅಪ್ಪಾಜಿ ಪರಿಸರ, ವಿಫುಲ್ ಜೈನ್ ಇತರರಿದ್ದರು.