ಜಿಲ್ಲೆ

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಚಾಮರಾಜನಗರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಡಿ. ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿ.ಹೆಚ್.ಡಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗೆ ಸೇರಿದ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆಗೆ ಡಿಸೆಂಬರ್ 5 ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ ಠಿಠಿ://ಚ್ಚಿಡಿ.ಚ್ಟ್ಞಠಿ.ಜಟ.ಜ್ಞಿ/ ನೋಡಬಹುದು. ಅಲ್ಲದೇ ಸಹಾಯವಾಣಿ ಸಮಖ್ಯೆ 8050770004 ಸಂಪರ್ಕಿಸುವಂತೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.