ಜಿಲ್ಲೆ

ಹಿಂದೂ ಕಾರ್ಯಕರ್ತನ ಹತ್ಯೆ ಖಂಡಿಸಿ ಪ್ರತಿಭಟನೆ

ಚಾಮರಾಜನಗರ: ಮಂಗಳೂರಿನಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರು, ಅಲ್ಲಿಂದ ಮೆರವಣಿಗೆ ಹೊರಟು ಶ್ರೀ ಭುವನೇಶ್ವರಿ ವೃತ್ತದಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿದರು. ಟೈರ್‌ಗೆ ಬೆಂಕಿ ಹಚ್ಚಿ, ಸರ್ಕಾರದ ವಿರುದ್ಧ ೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದಲೂ ಹಿಂದೂ ಕಾರ್ಯಕರ್ತರ ಹತ್ಯೆ ನಡೆಯುತ್ತಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ. ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಕಾರನ್ನು ಅಡ್ಡಗಟ್ಟಿ ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಿರುವ ವಿಚಾರದಲ್ಲಿ ಸರ್ಕಾರ ನೇರಹೊಣೆಯಾಗಿದೆ. ಶೀಘ್ರದಲ್ಲೇ ಕೊಲೆಗಡುಕರನ್ನು ಶಿಕ್ಷೆಗೆ ಒಳಪಡಿಸಬೇಕು. ಸುಹಾಸ್ ಶೆಟ್ಟಿ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ವೃಷಬೇಂದ್ರಪ್ಪ, ಉಪಾಧ್ಯಕ್ಷ ಶಿವುವಿರಾಟ್, ಕಾರ್ಯದರ್ಶಿ ನಟರಾಜು, ನಗರಮಂಡಲ ಅಧ್ಯಕ್ಷ ಶಿವರಾಜ್, ಯುವಮೋರ್ಚಾ ಜಿಲ್ಲಾಧ್ಯಕ್ಷ ಸೂರ್ಯ ಕುಮಾರ್, ಪ್ರಧಾನ ಕಾರ್ಯದರ್ಶಿ ಆನಂದ್‌ಭಗೀರಥ, ಮಾಧ್ಯಮ ವಕ್ತಾರ ಕಾಡಳ್ಳಿ ಕುಮಾರ್, ಸಹವಕ್ತಾರ ವೀರೇಂದ್ರ, ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ಚಂದ್ರಶೇಖರ್, ಉಪಾಧ್ಯಕ್ಷ ಬುಲೆಟ್ ಚಂದ್ರು, ಪ್ರಧಾನ ಕಾರ್ಯದರ್ಶಿ ಕೂಸಣ್ಣ, ಹರದನಹಳ್ಳಿ ರವಿ, ನಾಗರಾಜು, ಸುಂದರರಾಜು, ಮಾಂಬಳ್ಳಿ ರಾಮಣ್ಣ, ಕಿರಣ್ ಹಾಗೂ ಇತರರು ಭಾಗವಹಿಸಿದ್ದರು.