ಹಾಸನ: ಹಿಂದಿನಿಂದ ವೇಗವಾಗಿ ಬಂದ ಬೈಕ್ ಮುಂದೆ ಹೋಗುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹಾಸನ ತಾಲ್ಲೂಕು, ಶಾಂತಿಗ್ರಾಮ ಹೋಬಳಿಯ ಉಪ್ಪಾರಹೊಸಹಳ್ಳಿ ಗ್ರಾಮದ ನಿವಾಸಿ ರಂಗೇಗೌಡ (68) ಮೃತ ವ್ಯಕ್ತಿ.
ಮಂಗಳವಾರ ಮಧ್ಯಾಹ್ನ ರಂಗೇಗೌಡ ಅವರು ತಮ್ಮ ಬೈಕಿನಲ್ಲಿ ಹಾಸನಕ್ಕೆ ಬಂದು ಕೆಲಸ ಮುಗಿಸಿಕೊಂಡು ತಮ್ಮ ಊರಿಗೆ ವಾಪಸ್ ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ವೇಗವಾಗಿ ಬೈಕ್ ಚಾಲನೆ ಮಾಡಿಕೊಂಡು ಬಂದ ಸವಾರ ಎನ್‌ಎಚ್75 ಬಿಎಂ ರಸ್ತೆಯ ರಂಗನಾಥಪುರ ಬಳಿ ಮುಂದೆ ಹೋಗುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಬೈಕ್ ಸಮೇತ ರಸ್ತೆ ಮೇಲೆ ಬಿದ್ದ ರಂಗೇಗೌಡರಿಗೆ ಗಂಭೀರ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿರ್ಲಕ್ಷೃ ಹಾಗೂ ಅಜಾಗರೂಕತೆಯಿಂದ ಬೈಕ್ ಓಡಿಸಿಕೊಂಡು ಬಂದು ಸಾವಿಗೆ ಕಾರಣನಾದ ವ್ಯಕ್ತಿ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಮೃತರ ಮಗಳಾದ ಜಯಂತಿ ಅವರು ಕೊಟ್ಟ ದೂರಿನ ಮೇರೆಗೆ ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.