ಹಾಸನ: ಭಾರತೀಯ ವೈದ್ಯಕೀಯ ಸಂಘ ಹಾಗೂ ಜಿಲ್ಲಾ ರಾಜ್ಯ ಶಾಖೆ ಮತ್ತು ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾ.23ರಿಂದ ಎರಡು ದಿನಗಳ ಕಾಲ ರಾಜ್ಯಮಟ್ಟದ ಚಲನಚಿತ್ರ ಗೀತೆಗಳ ಸ್ಪರ್ಧೆಯ ಸ್ವರಾಂಜಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾಧ್ಯಕ್ಷ ಡಾ.ಎಚ್.ಆರ್.ದೇವದಾಸ್ ತಿಳಿಸಿದರು
ನಗರದ ಹಿಮ್ಸ್ ಆಸ್ಪತ್ರೆಯ ಆವರಣದಲ್ಲಿ ರಾಜ್ಯಮಟ್ಟದ ವೈದ್ಯರ ಮತ್ತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಕನ್ನಡ ಚಲನಚಿತ್ರ ಗೀತೆಗಳು ಸ್ಪರ್ಧೆಯನ್ನ ಎರಡು ದಿನಗಳ ಕಾಲ ಆಯೋಜಿಸಿದೆ.ಈಗಾಗಲೇ 140 ಜನರು ನೋಂದಣಿ ಮಾಡಿಕೊಂಡಿದ್ದಾರೆ. ಮೂರು ವಿಭಾಗದಲ್ಲಿ ಸ್ಪರ್ಧೆ ನಡೆಯಲಿದೆ. ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಈ ಕಾರ್ಯಕ್ರಮವನ್ನು ಆಸ್ಪತ್ರೆಯ ನಿರ್ದೇಶಕ ಡಾ.ಸಂತೋಷ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಭಾರತಿ ವೈದ್ಯ ಸಂಘದ ರಾಜ್ಯಾಧ್ಯಕ್ಷ ಡಾ. ಎಸ್.ಶ್ರೀನಿವಾಸ್, ಗೌರವ ಕಾರ್ಯದರ್ಶಿ ಡಾ.ಬಿ.ಪಿ.ಕರುಣಾಕರ, ಜಂಟಿ ಕಾರ್ಯದರ್ಶಿ ಡಾ.ಎಂ.ವೆಂಕಟಾಚಲಪತಿ, ಉಪಾಧ್ಯಕ್ಷ ಡಾ.ಪವನ್ ಕುಮಾರ್ ಪಾಟೀಲ್ ಸೇರಿದಂತೆ ರಾಜ್ಯ ಮತ್ತು ಜಿಲ್ಲೆಯ ಹಲವು ವೈದ್ಯರು ಆಗಮಿಸಲಿದ್ದಾರೆ ಎಂದು ತಿಳಿಸಿದರು
ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ ಮೊದಲ ಬಾರಿಗೆ ಈ ರೀತಿ ಚಲನಚಿತ್ರ ಗೀತೆಗಳು ಗಾಯನ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಈ ಕಾರ್ಯಕ್ರಮಕ್ಕೆ ಖ್ಯಾತ ಚಲನಚಿತ್ರ ಗೀತೆಗಳ ರಚನೆಕಾರ ವಿ ನಾಗೇಂದ್ರ ಪ್ರಸಾದ್ ಸೇರಿದಂತೆ ಹಲವು ಗಣ್ಯರು ಆಗಮಿಸಲಿದ್ದಾರೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಡಾ. ದಿನೇಶ್ ಬೈರೇಗೌಡ, ಡಾ. ಕುಮಾರ್, ಡಾ.ಸಾವಿತ್ರಿ ಹಾಜರಿದ್ದರು.