ಜಿಲ್ಲೆ

‘ಹುಬ್ಬಳ್ಳಿ ಜಗ್ಗಲಗಿ ಹಬ್ಬ’ ಮಾ. 9ರಂದು

ಹುಬ್ಬಳ್ಳಿ: ಇಲ್ಲಿನ ಮೂರು ಸಾವಿರ ಮಠದಲ್ಲಿ ‘ಹುಬ್ಬಳ್ಳಿ ಜಗ್ಗಲಗಿ ಹಬ್ಬ’ವನ್ನು ಮಾ. 9ರಂದು ಆಚರಿಸಲು ತೀರ್ವನಿಸಲಾಗಿದೆ ಎಂದು ಆಯೋಜಕ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹೇಳಿದರು.

ಹುಬ್ಬಳ್ಳಿ ಜಗ್ಗಲಗಿ ಹಬ್ಬ ಸಮಿತಿ ವತಿಯಿಂದ ನಗರದ ಮೂರುಸಾವಿರ ಮಠದ ಆವರಣದಲ್ಲಿ ಬುಧವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಸತತ 9 ವರ್ಷದಿಂದ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ಬಾರಿ ವಿಶೇಷವಾಗಿ ಗೋವಾ ಮತ್ತು ಮಹಾರಾಷ್ಟ್ರಗಳಿಂದ ಹೊಸ ತಂಡಗಳು ಸೇರ್ಪಡೆಯಾಗಲಿವೆ. ಈ ಹಬ್ಬವು ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ವ್ಯವಸ್ಥಿತವಾಗಿ ಹಬ್ಬವನ್ನು ಆಚರಿಸಲಾಗುವುದು ಎಂದು ಹೇಳಿದರು.

ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ಸಂಜಯ ಕಪಟಕರ, ಉಪ ಮೇಯರ್ ಉಮಾ ಮುಕುಂದ, ಪಾಲಿಕೆ ಸದಸ್ಯರಾದ ತಿಪ್ಪಣ್ಣ ಮಜ್ಜಗಿ, ಮೀನಾಕ್ಷಿ ವಂಟಮುರಿ, ಮಾಜಿ ಮಹಾಪೌರ ವೆಂಕಟೇಶ ಮೇಸ್ತ್ರಿ, ಪ್ರಮುಖರಾದ ಚಂದ್ರಶೇಖರ ಗೋಕಾಕ, ಸುಭಾಷಸಿಂಗ್ ಜಮಾದಾರ, ಪ್ರಭು ನವಲಗುಂದಮಠ, ಬಸವರಾಜ ಅಮ್ಮಿನಬಾವಿ, ದತ್ತಮೂರ್ತಿ ಕುಲಕರ್ಣಿ, ಮಹೇಂದ್ರ ಕೌತಾಳ, ಡಾ. ಕ್ರಾಂತಿಕಿರಣ, ಸತೀಶ ಶೇಜವಾಡಕರ, ಜಗದೀಶ ಬೂಳ್ಳಾನವರ, ಶಶಿ ಬಿಜವಾಡ, ಇತರರಿದ್ದರು.