ಜಿಲ್ಲೆ

ಹುಬ್ಬಳ್ಳಿಯಲ್ಲಿ ಅಮಿತ್ ಷಾಗೆ ಸ್ವಾಗತ

ಹುಬ್ಬಳ್ಳಿ : ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿ ಏರ್ಪಡಿಸಿದ್ದ ಬಿಜೆಪಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಳ್ಳುವುದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಗುರುವಾರ ಮಧ್ಯಾಹ್ನ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.

ಬಿಎಸ್​ಎಫ್ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅಮಿತ್ ಷಾ ಅವರನ್ನು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಶಾಸಕ ಅರವಿಂದ ಬೆಲ್ಲದ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಅವರು ಶಾಲು ಹೊದಿಸಿ, ಸನ್ಮಾನಿಸಿದರು.

ಮೇಯರ್ ಈರೇಶ ಅಂಚಟಗೇರಿ ಅವರು ಜೈನ ಮುನಿ ಶ್ರೀ ಅಜಿತಶೇಖರ ಸುರಜಿ ಅವರು ರಚಿಸಿದ ದಿ ಕರ್ವ್ ಪುಸ್ತಕ ನೀಡಿದರು.

ಮಹಾನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜಯ ಕಪಟಕರ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಪೊಲೀಸ್ ಆಯುಕ್ತ ರಮಣ ಗುಪ್ತ ಹಾಗೂ ಮತ್ತಿತರರು ಹಾಜರಿದ್ದರು. ಅಮಿತ್ ಷಾ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಹೆಲಿಕ್ಯಾಪ್ಟರ್ ಮೂಲಕ ಸಂಡೂರಿಗೆ ತೆರಳಿದರು.