ಅರಕಲಗೂಡು: ತಾಲೂಕಿನ ಹೆಗ್ಗಡಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಪಾರ್ವತಮ್ಮ, ಉಪಾಧ್ಯಕ್ಷರಾಗಿ ನಂಜಪ್ಪ ಆಯ್ಕೆಯಾದರು.
ಬುಧವಾರ ನಡೆದ ಚುನಾವಣೆಯಲ್ಲಿ ಪಂಚಾಯಿತಿಯ 9 ಸದಸ್ಯರ ಪೈಕಿ 7 ಸದಸ್ಯರು ಚುನಾವಣೆ ಪ್ರಕ್ರಿಯೆಗೆ ಹಾಜರಾಗಿದ್ದರು. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಪಾರ್ವತಮ್ಮ 6 ಮತಗಳನ್ನು ಪಡೆದರೆ, ಪ್ರತಿಸ್ಪರ್ಧಿ ನೇತ್ರಾವತಿ ಒಂದು ಮತ ಪಡೆದರು.\
ಉಪಾಧ್ಯಕ್ಷ ಸ್ಥಾನಕ್ಕೆ ನಂಜಪ್ಪ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆಯಾದರು. ಕಾರ್ಮಿಕ ನಿರೀಕ್ಷಕ ವಿಜಯಕುಮಾರ್ ಚುನಾವಣಾ ಕಾರ್ಯನಿರ್ವಹಿಸಿದರು. ಪಿಡಿಒ ಸಂತೋಷ್ ಇದ್ದರು.