ಜಿಲ್ಲೆ

ಹೆಗ್ಗಳದ ಸರ್ಕಾರಿ ಶಾಲೆಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

ವಿರಾಜಪೇಟೆ: ವಿರಾಜಪೇಟೆ: ಹೆಗ್ಗಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

ಕರ್ನಾಟಕ ಚಲನಚಿತ್ರ ಕಲಾವಿದರ ಕ್ಷೇಮಾಭಿವೃದ್ಧಿ ಮಂಡಳಿ, ಧಾರವಾಡ ಹಾಗೂ ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್, ಚೇತನ ಫೌಂಡೇಷನ್ ಕರ್ನಾಟಕ ಸಂಸ್ಥೆಯ ಸಹಭಾಗಿತ್ವದೊಂದಿಗೆ ಶಾಲೆಯ ಪ್ರಗತಿಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.

ಭಾನುವಾರ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್‌ನ ಶ್ರೀಕೃಷ್ಣರಾಜ ಪರಿಷದ್ ಮಂದಿರದಲ್ಲಿ ಜರುಗಿದ ಕರ್ನಾಟಕ ರಾಜ್ಯೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಶಾಲೆಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಮುಖ್ಯಶಿಕ್ಷಕಿ ಕಮಲಮ್ಮ ಪ್ರಶಸ್ತಿಯನ್ನು ಪಡೆದುಕೊಂಡರು.

ಗ್ರಾಮಸ್ಥರು, ಪಾಲಕರು, ಇಲಾಖೆ ಹಾಗೂ ದಾನಿಗಳ ಸಹಕಾರದಿಂದ ಶಾಲೆ ಅಭಿವೃದ್ಧಿ ಕಂಡಿದ್ದು, ಶಾಲೆಗೆ ಪ್ರಶಸ್ತಿ ಲಭಿಸಿರುವುದು ಸಂತಸ ತಂದಿದೆ ಎಂದು ಮುಖ್ಯ ಶಿಕ್ಷಕಿ ಕಮಲಮ್ಮ ಪ್ರತಿಕ್ರಿಯೆ ನೀಡಿದರು.