ರಾಯಚೂರು: ಮಹತ್ವಾಕಾಂಕ್ಷಿ ಜಿಲ್ಲೆಗಳ ಪ್ರಗತಿಯಲ್ಲಿ ರಾಯಚೂರು ಜಿಲ್ಲೆ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಪ್ರಥಮ ರ‌್ಯಾಂಕ್ ಪಡೆದಿದ್ದು, ಉಳಿದ ವಲಯಗಳಲ್ಲಿಯೂ ಹೆಚ್ಚಿನ ಪ್ರಗತಿ ಸಾಸುವತ್ತ ಆಯಾ ಇಲಾಖೆ ಅಕಾರಿಗಳು ಗಮನ ಹರಿಸಬೇಕು ಎಂದು ಜಲಶಕ್ತಿ ಸಚಿವಾಲಯ, ನದಿ ಅಭಿವೃದ್ಧಿ ಮತ್ತು ಗಂಗಾ ಪುನರುಜ್ಜೀವನ ಇಲಾಖೆ ಜಂಟಿ ಕಾರ್ಯದರ್ಶಿ ಸುಬೋಧ್ ಯಾದವ್ ಸೂಚಿಸಿದರು.
ಸ್ಥಳೀಯ ಕೃಷಿ ವಿಜ್ಞಾನಗಳ ವಿವಿ ಆಡಳಿತ ಭವನದ ಸಭಾಂಗಣದಲ್ಲಿ ಬುಧವಾರ ಮಹತ್ವಾಕಾಂಕ್ಷಿ ಜಿಲ್ಲೆ ಕಾರ್ಯಕ್ರಮ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರದ ಯೋಜನೆಗಳನ್ನು ವಿದ್ಯಾರ್ಥಿಗಳಿಗೆ ಮುಟ್ಟಿಸುವಲ್ಲಿ ಶಿಕ್ಷಣ ಇಲಾಖೆ ಅಕಾರಿಗಳು ಶ್ರಮಿಸಬೇಕು ಎಂದರು.
ಜಿಲ್ಲೆಯಲ್ಲಿ ಕೆರೆಗಳನಿರ್ಮಾಣ ಮತ್ತು ಜಲಮೂಲಗಳ ಪುನರುಜ್ಜೀವನಗೊಳಿಸುವಿಕೆ ಕಾರ್ಯವನ್ನು ಕಾಳಜಿ ವಹಿಸಿ ಮಾಡಬೇಕು. ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಾಣ ಮಾಡಲಾಗಿರುವ ಅಮೃತ ಸರೋವರಗಳನ್ನು ಅಚ್ಚುಕಟ್ಟಾಗಿ, ಜನರಿಗೆ ಅನುಕೂಲವಾಗುವ ರೀತಿಯಲ್ಲಿ ನಿರ್ಮಾಣ ಮಾಡಬೇಕು.
ಕೆರೆ ದಂಡೆಯಲ್ಲಿ ಧ್ವಜ ಸ್ತಂಭ ನಿರ್ಮಾಣ ಮಾಡಿ ಧ್ವಜಾರೋಹಣಕ್ಕೆ ಅನುಕೂಲ ಕಲ್ಪಿಸಬೇಕು. ಕೆರೆ ನಿರ್ಮಾಣ ಕಾಮಗಾರಿ ಮುಗಿದ ನಂತರ ಚಿತ್ರಣ ಮತ್ತು ಕೆರೆಗೆ ನೀರು ತುಂಬಿದ ಭಾವಚಿತ್ರಗಳನ್ನು ಸಲ್ಲಿಸಬೇಕು. ಕೆರೆ ಸುತ್ತಲೂ ಸ್ವಚ್ಛತೆ ಗಮನ ಹರಿಸಬೇಕು.
ಜಿಲ್ಲೆಯಲ್ಲಿ ಆರೋಗ್ಯ ಮತ್ತು ಪೌಷ್ಠಿಕಾಂಶದ ವಿಷಯದಲ್ಲಿ ಜಿಲ್ಲೆ ನೀತಿ ಆಯೋಗ ಬಿಡುಗಡೆಗೊಳಿಸಿರುವ ಶ್ರೇಣಿಯಲ್ಲಿ 5ನೇ ಸ್ಥಾನದಲ್ಲಿದ್ದು, ಪ್ರಗತಿಯಲ್ಲಿ ಆಗಿರುವ ನ್ಯೂನ್ಯತೆಗಳನ್ನು ಸರಿಪಡಿಸಿ ಒಂದನೇ ರ‌್ಯಾಂಕ್ ಪಡೆಯುವತ್ತ ಅಕಾರಿಗಳು ಗಮನ ಹರಿಸಬೇಕು. ಕೃಷಿ ಇಲಾಖೆ ಇನ್ನೂ ಹೆಚ್ಚಿನ ಪ್ರಗತಿ ಸಾಸಬೇಕು ಎಂದು ಸುಬೋಧ್ ಯಾದವ್ ತಿಳಿಸಿದರು.
ಸಭೆಯಲ್ಲಿ ಜಿ.ಪಂ. ಸಿಇಒ ರಾಹುಲ್ ತುಕಾರಾಮ್, ಪ್ರೊಬೇಷನರಿ ಐಎಎಸ್ ಅಕಾರಿ ಸಾಹಿತ್ಯ ಆಲದಕಟ್ಟೆ, ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ, ಮಹಾತ್ವಾಕಾಂಕ್ಷಿ ಜಿಲ್ಲೆ ಕಾರ್ಯಕ್ರಮಾಕಾರಿ ಮಹ್ಮದ್ ಯುಸ್ೂ, ವಿಜ್ಞಾನಿಗಳಾದ ಜ್ಯೋತಿ, ಜಯಪ್ರಕಾಶ, ಅನಿಶಾ, ಆಂಜಿನೇಯಲು ಹಾಗೂ ವಿವಿಧ ಇಲಾಖೆ ಅಕಾರಿಗಳು ಉಪಸ್ಥಿತರಿದ್ದರು.