ಜಿಲ್ಲೆ

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು

ಎಂ.ಎನ್​.ಕೋಟೆ: ಗುಬ್ಬಿ ತಾಲೂಕಿನ ದೊಡ್ಡಗುಣಿ ಶಿವಸಂದ್ರದ ಬಳಿ ಮಂಗಳವಾರ ಚಲಿಸುತ್ತಿದ್ದ ವೇಳೆ ಕಾರಿನಲ್ಲಿ ಶಾರ್ಟ್​ ಸಕ್ಯೂರ್ಟ್​ನಿಂದ ಕಾಣಿಸಿಕೊಂಡ ಬೆಂಕಿಗೆ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ತುಮಕೂರು ಕಡೆಯಿಂದ ಹೊಸದುರ್ಗ ಮಾರ್ಗವಾಗಿ ಬರುತ್ತಿದ್ದಾಗ ಟನೆ ಸಂಭವಿಸಿದೆ. ಚಾಲಕ ಹೇಮಂತ್​ ಪ್ರಾಣಪಾಯದಿಂದ ಪಾರಾಗಿದ್ದಾರೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ಬಂದು ಬೆಂಕಿ ನಂದಿಸುವ ವೇಳೆಗಾಗಲೆ ಕಾರು ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿದ್ದಾರೆ.