ಚಿತ್ರದುರ್ಗ: ಕೃಷಿ ಯಂತ್ರಧಾರೆ ಕೇಂದ್ರಗಳ ಬಲವರ್ಧನೆಗಾಗಿ ಪ್ರಸಕ್ತ ಸಾಲಿನ ರಾಜ್ಯ ಕೃಷಿ ವಲಯ ಕೃಷಿ ಯಾಂತ್ರೀಕರಣ ಯೋಜನೆಯಡಿ ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ಸರ್ಕಾರ ಅನುಮೋದನೆ ನೀಡಿದೆ. ಜಿಲ್ಲೆಗೆ ಸಾಮಾನ್ಯ ವರ್ಗದಡಿ ಎಫ್‌ಪಿಒ, ಎನ್‌ಜಿಒ, ಇತರೆ ಸಂಘ- ಸಂಸ್ಥೆಗಳು ಚಾಲ್ತಿಯಲ್ಲಿರುವ ಸಿಎಚ್‌ಎಸ್‌ಸಿಗಳಿಗೆ ಒಂದು ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಒಂದು ಕಂಬೈನ್ಡ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ಸೆ. 30 ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕೆಂದು ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್ ತಿಳಿಸಿದ್ದಾರೆ.