ಜಿಲ್ಲೆ

ಹೈಪರ್ ಟೆನಷನ್ ತಡೆಗೆ ಜಾಗೃತಿ ಅತ್ಯಗತ್ಯ

ಬಾಗಲಕೋಟೆ:  ಹೈಪರ್ ಟೆನಷನ್ ಎಂಬುದು ಸೈಲೆಂಟ್ ಕಿಲ್ಲರ್ ಆಗಿದೆ. ಇದು ಹೃದ್ರೋಗ ಸೇರಿದಂತೆ ಇತರೆ ದೀರ್ಘಕಾಲ ಕಾಡುವ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಸದ್ದಿಲ್ಲದೇ ದಾರಿ ಮಾಡಿಕೊಡುತ್ತದೆ. ಮನುಷ್ಯನ ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ರಕ್ತದೊತ್ತಡವನ್ನು ನಿರ್ವಹಿಸುವುದು ಅತ್ಯಗತ್ಯವಾಗಿದೆ ಎಂದು ಬಾಗಲಕೋಟೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಂಜುನಾಥ ಡಿ.ಎನ್ ಹೇಳಿದರು.

ಬಾಗಲಕೋಟೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಜಿಲ್ಲಾ ಸಮೀಕ್ಷಣಾ ಘಟಕ,ಎನ್ ಸಿಡಿ ಘಟಕ, ತಾಲೂಕು ಆರೋಗ್ಯ ಕಚೇರಿ ಹಾಗೂ ಡಾ.ಸುಭಾಸ ಪಾಟೀಲ ಇನ್ಸಿ÷್ಟಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಸೈನ್ಸ್ ಬಾಗಲಕೋಟೆ ಇವರ ಸಹಯೋಗದಲ್ಲಿ ಶನಿವಾರ ರಾಷ್ಟಿçÃಯ ಅಸಾಂಕ್ರಾಮಿಕ ರೋಗಗಳ ಕಾರ್ಯಕ್ರಮದಡಿಯಲ್ಲಿ ವಿಶ್ವ ಅಧಿಕ ರಕ್ತದೊತ್ತಡ ದಿನಾಚರಣೆ ಮತ್ತು ರಕ್ತದೊತ್ತಡ ಕುರಿತು ಅರಿವು ಮತ್ತು ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಅಧಿಕ ರಕ್ತದೊತ್ತಡದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಹೂ ಬಿಪಿ ಗಂಭೀರತೆಯನ್ನ ಅರ್ಥಮಾಡಿಸುವ ಸಲುವಾಗಿ ಪ್ರತಿ ವರ್ಷ ಮೇ ೧೭ರಂದು ವಿಶ್ವ ಅಧಿಕ ರಕ್ತದೊತ್ತಡ ದಿನವನ್ನು ಆಚರಿಸಲಾಗುತ್ತದೆ. ಈ ದಿನವು ಅಧಿಕ ರಕ್ತದೊತ್ತಡಕ್ಕೆ ಸಂಬAಧಿಸಿದ ಅಪಾಯಗಳ ಬಗ್ಗೆ ಜಾಗೃತಿ ಮೂಡಿಸುವ ತಡೆಗಟ್ಟುವ ಮತ್ತು ನಿರ್ವಹಣೆಗೆ ಪರಿಣಾಮಕಾರಿ ತಂತ್ರಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಲಾಗಿದೆ.ಆದ್ದರಿAದ ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಉಪ್ಪು ಸೇವನೆ ಕಡಿಮೆ ಮಾಡುವುದು.ಹೆಚ್ಚು ಹಣ್ಣು ಮತ್ತು ತರಕಾರಿಗಳನ್ನು ತಿನ್ನುವುದು.ನಿಯಮಿತವಾಗಿ ದೇಹ ಸಕ್ರಿಯವಾಗಿರುವಂತೆ ನೋಡಿಕೊಳ್ಳುವುದು.ತಂಬಾಕು ಸೇವನೆ ಮಾಡದಿರುವುದು. ಆಲ್ಕೊಹಾಲ್ ಕಡಿಮೆ ಮಾಡುವುದು.ಆಹಾರದಲ್ಲಿ ಟ್ರಾನ್ಸ್ ಕೊಬ್ಬನ್ನು ನಿವಾರಿಸುವುದು . ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳುವುವುದು.ರಕ್ತದೊತ್ತಡವನ್ನು ನಿಯಮಿತವಾಗಿ ಪರಿಶೀಲಿಸುವುದು. ಅಧಿಕ ರಕ್ತದೊತ್ತಡಕ್ಕೆ ಚಿಕಿತ್ಸೆ ತೆಗೆದುಕೊಳ್ಳುವುದು ಹೀಗೆ ಕ್ರಮಗಳನ್ನು ದಿನನಿತ್ಯ ಪಾಲಿಸುವುದರಿಂದ ಮನುಷ್ಯನ ಆರೋಗ್ಯದಲ್ಲಿ ಬದಲಾವಣೆ ಕಾಣಲು ಸಾಧ್ಯ ಎಂದರು.

ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ದಯಾನಂದ ಕರೆಯನವರ, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಸುವರ್ಣ ಕುಲಕರ್ಣಿ, ಡಿಎಲ್‌ಓ ಎಸ್.ಸಿ.ಪಾಟೀಲ,ಡಿಎಚ್‌ಇಒ ಶ್ರೀಮತಿ ಶಶಿಕಲಾ, ಎನ್ ಸಿಡಿ ಕಾರ್ಯಕ್ರಮ ಸಂಯೋಜಕ ಡಾ.ಅಜೀತ ಪಾಟೀಲ,ಜಿಲ್ಲಾ ಆರ್ಥಿಕ ಮತ್ತು ಲಾಜಿಸ್ಟಿಕ್ಸ್ ಸಲಹೆಗಾರ ಎಂ.ವಿ.ಪಾಟೀಲ ಸೇರಿದಂತೆ ಜಿಲ್ಲಾ ಸಮೀಕ್ಷಣಾಧಿಕಾರಿಗಳ ಕಚೇರಿ ಸಿಬ್ಬಂದಿ.