ಜಿಲ್ಲೆ

ಹೊಣೆಗಾರಿಕೆಯಿಂದ ಕರ್ತವ್ಯ ನಿರ್ವಹಿಸಿ

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ೆ.17ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ೆ.18ರಂದು ಚಾಮರಾಜನಗರದಲ್ಲಿ ಫಲಾನುಭವಿಗಳ ಸಮಾವೇಶ ನಿಗದಿಯಾಗಿದೆ.

ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಭಾನುವಾರ ಅಧಿಕಾರಿಗಳ ಸಭೆ ನಡೆಸಿ ಅಗತ್ಯ ಸಿದ್ಧತೆ ಕೈಗೊಳ್ಳಲು ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಸಚಿವ ಕೆ.ವೆಂಕಟೇಶ್ ಅಭಿವೃದ್ಧಿ ಕಾಮಗಾರಿಗಳ ವಿವರ ಪಡೆದುಕೊಂಡರು.

ಸವಲತ್ತು, ಪರಿಕರ ಸೇರಿದಂತೆ ಯಾವುದೇ ಸಲಕರಣೆಗಳನ್ನು ಮುಂಚಿತವಾಗಿಯೇ ದಾಸ್ತಾನು ಮಾಡಿ ಕಾರ್ಯಕ್ರಮದಲ್ಲಿ ವ್ಯವಸ್ಥಿತವಾಗಿ ವಿತರಣೆ ಮಾಡಬೇಕಿದೆ. ಫಲಾನುಭವಿಗಳಿಗೆ ಮಾಹಿತಿ ನೀಡಿ ಸಮಾವೇಶಕ್ಕೆ ಕರೆತಂದು ಅವರಿಗೆ ವಿತರಿಸುವ ಕಾರ್ಯ ಅತ್ಯಂತ ಹೊಣೆಗಾರಿಕೆಯಿಂದ ನಿರ್ವಹಿಸಬೇಕೆಂದು ತಿಳಿಸಿದರು.

ಫಲಾನುಭವಿಗಳ ಸಮಾವೇಶದಲ್ಲಿ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವ ಮೂಲಕ ಇಲಾಖೆಗಳು ಜನರಿಗೆ ನೆರವಾಗಬೇಕಿದೆ. ಇದಕ್ಕಾಗಿ ಪ್ರತಿ ಇಲಾಖೆಗಳು ವಿವರವಾದ ಪಟ್ಟಿ ಮಾಡಬೇಕು. ಸಾಕಷ್ಟು ಸಿದ್ಧತೆಯೊಂದಿಗೆ ಫಲಾನುಭವಿಗಳ ಸಮಾವೇಶ ಆಯೋಜಿಸಬೇಕು ಎಂದು ಸೂಚಿಸಿದರು.

ಎಂ.ಎಸ್.ಐ.ಎಲ್ ಅಧ್ಯಕ್ಷ ಸಿ.ಪುಟ್ಟರಂಗಶೆಟ್ಟಿ, ಸಂಸದ ಸುನೀಲ್ ಬೋಸ್, ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಎಚ್.ಎಂ. ಗಣೇಶ್ ಪ್ರಸಾದ್, ಎಂ.ಆರ್.ಮಂಜುನಾಥ್, ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ನಗರಸಭೆ ಅಧ್ಯಕ್ಷ ಎಸ್.ಸುರೇಶ್, ಉಪಾಧ್ಯಕ್ಷೆ ಮಮತಾ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ. ಚಂದ್ರು, ಚೂಡಾ ಅಧ್ಯಕ್ಷ ಮಹಮದ್ ಅಸ್ಗರ್(ಮುನ್ನಾ), ಜಿಲ್ಲಾಧಿಕಾರಿ ಶಿಲ್ಪಾನಾಗ್, ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ. ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಉಪವಿಭಾಗಾಧಿಕಾರಿ ಬಿ.ಆರ್.ಮಹೇಶ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪಿ. ಲಕ್ಷ್ಮೀ, ಜಿಲ್ಲೆ ಎಲ್ಲ ತಹಸೀಲ್ದಾರ್‌ಗಳು, ತಾಲೂಕು ಪಂಚಾಯಿತಿ ಇಒಗಳು, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.