ಚಿತ್ರದುರ್ಗ: ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ,ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಜಿಲ್ಲೆಯಿಂದ,ಹೊರ ಜಿಲ್ಲೆ,ರಾಜ್ಯಗಳಿಗೆ ಮೇವು ಸಾಗಾಣಿಕೆಗೆ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿಆರ್‌ಜೆ ದಿವ್ಯಾಪ್ರಭು ಹೇಳಿದರು.
ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತವೆಂದು ಸರ್ಕಾರ ಘೋಷಿಸಿದ್ದು, ಜಾನುವಾರುಗಳಿಗೆ ಮುಂಬರುವ ದಿನಗಳಲ್ಲಿ ಮೇವಿನ ಕೊರತೆ ಸಾಧ್ಯತೆ ಇರುವುದರಿಂದ, ಪ್ರಸ್ತುತ ಜಿಲ್ಲೆಯಲ್ಲಿ ಲಭ್ಯವಿರುವ ಮೇವನ್ನು ಕಾಪಾಡಿಕೊಳ್ಳಬೇಕಿದೆ. ಆದ್ದರಿಂದ ಈ ನಿಟ್ಟಿನಲ್ಲಿ ಸೂಕ್ತ ಕ್ರಮಕ್ಕೆ ಎಸ್‌ಪಿ, ಎಸಿ ಹಾಗೂ ತಹಸೀಲ್ದಾರ್‌ಗಳಿಗೆ ಸೂಚಿಸಲಾಗಿದೆ ಎಂದು ಡಿಸಿ ತಿಳಿಸಿದ್ದಾರೆ.