ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ವಿವಿಧ ಇಲಾಖೆ, ನಿಗಮ ಮಂಡಳಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹೊರಗುತ್ತಿಗೆ ಕೆಲಸ ಮಾಡುವವರಿಗೆ ಅನೂಕುಲವಾಗುವಂತೆ ಸಹಕಾರಿ ಸಂಘದ ಮೂಲಕ ಶಾಸನಾತ್ಮಕವಾಗಿ ಸೌಲಭ್ಯಗಳನ್ನು ಒದಗಿಸಲು ಸಂಘವನ್ನು ಸ್ಥಾಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಕಾರ್ಮಿಕ ಇಲಾಖೆ ಅಯೋಜಿಸಿದ್ದ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದ್ದೊz್ದೆÃಶ ಸಂಘ ರಚಿಸುವ ಕುರಿತ ಪ್ರಥಮ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆ ಮತ್ತು ತಾಲೂಕು ಮುಂತಾದ ವಿವಿಧ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ, ವಾಹನ ಚಾಲಕ , ಡಿ ಗ್ರೂಪ್, ಅಡುಗೆ ಇನ್ನಿತರ ಕಡೆಗಳಲ್ಲಿ ಕೆಲಸ ಮಾಡುತ್ತಿರುವ ನೌಕರರ ಸಮಸ್ಯೆಗಳನ್ನು ಅರಿತು, ಈಗಾಗಲೇ ಬೀದರ್ ಜಿಲ್ಲೆಯಲ್ಲಿ ಕಾರ್ಮಿಕರ ಇಲಾಖೆ ಸಂಘವನ್ನು ಸ್ಥಾಪಿಸಿ ಯಶಸ್ವಿಯಾಗಿದೆ. ಇದನ್ನು ಗಮನಿಸಿ ಅದೇ ಮಾದರಿಯಲ್ಲಿ ನಮ್ಮ ಜಿಲ್ಲೆಯಲ್ಲಿಯೂ ಸಂಘ ಸ್ಥಾಪನೆಗೆ ಬೇಡಿಕೆ ಇರುವುದರಿಂದ ಜಿಲ್ಲಾ ಕಾರ್ಮಿಕರ ಸೇವೆಗೆ ವಿವಿದೊz್ದÉÃಶ ಸಂಘವನ್ನು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸ್ಥಾಪಿಸಲಾಗುತ್ತಿದೆ ಎಂದರು.
ಈ ಸಂಘದ ಮೂಲಕ ನೌಕರರಿಗೆ ಕನಿಷ್ಠ ವೇತನ, ಪಿಎಫ್, ಇಎಸ್‌ಐ ಸೌಲಭ್ಯ ಹಾಗೂ ಹೊಗಗೊತ್ತಿಗೆ ಏಜನ್ಸಿಗಳಿಂದ ಆಗುತ್ತಿರುವ ಸಮಸ್ಯೆಗಳ ಶೋಷಣೆಗಳನ್ನು ತಪ್ಪಿಸಲು ಹಾಗೂ ನೌಕರ ವೇತನ ಪಾವತಿ, ಶಾಸನಾತ್ಮಕವಾಗಿ ನೀಡಬೇಕಾದ ಸೌಲಭ್ಯಗಳನ್ನು ಒದಗಿಸಲು ಸಂಘದ ಮೂಲಕ ಕ್ರಮ ಕೈಗೊಳ್ಳಬಹುದು ಎಂದು ಹೇಳಿದರು.
ಎಲ್ಲ ತಾಲೂಕುಗಳಿಂದ ನಿರ್ದೇಶಕರನ್ನು ಸಂಘಕ್ಕೆ ಆಯ್ಕೆ ಮಾಡಿಕೊಳ್ಳಲಾಗುವುದು. ಜಿಪಂ ಸಿಇಒ ಉಪಾಧ್ಯಕ್ಷರಾಗಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ಸಮಿತಿಗೆ ಕಾರ್ಮಿಕರ ಅಧಿಕಾರಿ ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ. ಈ ರೀತಿಯಾದ ಸಂಘವನ್ನು ಸ್ಥಾಪಿಸಿ ಏ. ೪ ಕ್ಕೆ ಮತ್ತೊಂದು ಸಭೆಯನ್ನು ನಡೆಸಿ ಅಂತಿಮ ರೂಪು-ರೇಷೆ ಸಿದ್ದಪಡಿಸಲಾಗುವುದು ಎಂದು ತಿಳಿಸಿದರು.
ಜಿಪಂ ಸಿಇಒ ಎಚ್.ಎಸ್. ಕೀರ್ತನಾ, ಜಿಪಂ ಉಪಕಾರ್ಯದರ್ಶಿ ಶಂಕರ್ ಕೊರವರ , ಸಹಕಾರ ಇಲಾಖೆಯ ತೇಜಸ್ವಿನಿ, ಕಾರ್ಮಿಕ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.