ಮದ್ದೂರು ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಹೊಳೆ ಆಂಜನೇಯಸ್ವಾಮಿ ದೇಗುಲದಲ್ಲಿ ಹನುಮದ್ ಜಯಂತಿ ಅಂಗವಾಗಿ ನಡೆದ ವಿಶೇಷ ಧಾರ್ಮಿಕ ಕಾರ್ಯಕ್ರಮಕ್ಕೆ ಶಾಸಕ ಸಿ.ಎಸ್.ಪುಟ್ಟರಾಜು ಆ ಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಪ್ರದಾನ ಅರ್ಚಕ ಪ್ರದೀಪ್‌ಆಚಾರ್ಯ ಇದ್ದಾರೆ. 
ಜಿಲ್ಲೆ

ಹೊಳೆ ಆಂಜನೇಯಸ್ವಾಮಿಗೆ ವಿಶೇಷ ಪೂಜೆ

ಮದ್ದೂರು: ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಹೊಳೆ ಆಂಜನೇಯಸ್ವಾಮಿ ದೇಗುಲದಲ್ಲಿ ಹನುಮ ಜಯಂತಿ ಅಂಗವಾಗಿ ಗುರುವಾರ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ದೇಗುಲದ ಆವರಣದಲ್ಲಿ ಮಧ್ಯಾಹ್ನ ಮಹಾ ರಥೋತ್ಸವ ನಡೆಯಿತು. ಈ ವೇಳೆ ಜಿಲ್ಲೆ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು. ಇದೇ ವೇಳೆ ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿತರಣೆ ಮಾಡಲಾಯಿತು.
ದೇಗುಲದ ಪ್ರದಾನ ಅರ್ಚಕ ಪ್ರದೀಪ್ ಆಚಾರ್ಯ ಧಾರ್ಮಿಕ ಕಾರ್ಯಕ್ರಮಗಳ ನೇತೃತ್ವ ವಹಿಸಿದ್ದರು. ಸಂಜೆ ದೇವಾಲಯವನ್ನು ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿತ್ತು. ಶಾಸಕರಾದ ಡಿ.ಸಿ.ತಮ್ಮಣ್ಣ, ಸಿ.ಎಸ್.ಪುಟ್ಟರಾಜು ದೇಗುಲಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.