ಚಿತ್ರದುರ್ಗ: ಚಳ್ಳಕೆರೆ ತಾಲೂಕು ಪರಶುರಾಂಪುರವನ್ನು ಹೊಸ ತಾಲೂಕು ಕೇಂದ್ರವನ್ನಾಗಿ ಘೋಷಿಸುವಂತೆ ಶಾಸಕ ಟಿ.ರಘುಮೂರ್ತಿ ಸೋಮವಾರ ಅಧಿವೇಶನದಲ್ಲಿ ಸರ್ಕಾರವನ್ನು ಒತ್ತಾಯಿಸಿದರು.
- ಪ್ರಶ್ನೋತ್ತರ ಕಲಾಪದ ವೇಳೆ ಮಾತನಾಡಿದ ಅವರು, ನಾನು 3ನೇ ಬಾರಿಗೆ ಶಾಸಕನಾಗುತ್ತಿದ್ದೇನೆ. ಹಲವು ಬಾರಿ ಈ ಕುರಿತ ನನ್ನ ಹಿಂದಿನ ಪ್ರಶ್ನೆಗಳಿಗೆ ಸಂಬಂಧಿಸಿದ ಸಚಿವರು, ಜಿಲ್ಲಾಧಿಕಾರಿಯಿಂದ ಪ್ರಸ್ತಾವನೆ ಬಂದಿಲ್ಲ ಎಂದು ತಿಳಿಸಿದ್ದಾರೆ.
ಎಂ.ಪಿ.ಪ್ರಕಾಶ್ ವರದಿಯಲ್ಲಿ 43 ಹೊಸ ತಾಲೂಕುಗಳ ಪಟ್ಟಿಯಲ್ಲಿ ಪರಶುರಾಂಪುರ ಸೇರಿತ್ತು. ಆದರೆ ಬದಲಾದ ರಾಜಕೀಯ ಸನ್ನಿವೇಶದಿಂದಾಗಿ ಬೇಡಿಕೆ ಈಡೇರಿಲ್ಲ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರನ್ನು ಒತ್ತಾಯಿಸಿದ್ದಾರೆ. ಈ ಬಾರಿ ತಾಲೂಕು ಕೇಂದ್ರ ಮಾಡದಿದ್ದರೆ ನಾನು ಮತ್ತೆ ಸ್ಪರ್ಧಿಸುವುದಿಲ್ಲವೆಂದು ಕ್ಷೇತ್ರದ ಜನರಿಗೆ ಹೇಳಿದ್ದೇನೆ ಎಂದರು.