ಜಿಲ್ಲೆ

ಹೋಬಳಿ ಅಧ್ಯಕ್ಷರಾಗಿ ನೇಮಕ

ಮಡಿಕೇರಿ:

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಡಿಕೇರಿ ತಾಲೂಕು ಮೂರ್ನಾಡು ಹೋಬಳಿ ಅಧ್ಯಕ್ಷರಾಗಿ ಸಾಹಿತಿ ಈರಮಂಡ ಹರಿಣಿ ವಿಜಯ್ ಅವರನ್ನು ನೇಮಿಸಲಾಗಿದೆ. ಮಡಿಕೇರಿ ತಾಲೂಕು ಕಸಾಪ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ಶಿಫಾರಸಿನ ಮೇಲೆ ಜಿಲ್ಲಾಧ್ಯಕ್ಷ ಎಂ ಪಿ. ಕೇಶವ ಕಾಮತ್ ಈ ನೇಮಕ ನೇಮಕ ಮಾಡಿದ್ದಾರೆ.

ಪೊನ್ನಂಪೇಟೆ ತಾಲೂಕು ಶ್ರೀಮಂಗಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಸಾಹಿತಿ ಉಳುವಂಗಡ ಕಾವೇರಿ ಉದಯ ಅವರನ್ನು ನೇಮಿಸಲಾಗಿದೆ. ಪೊನ್ನಂಪೇಟೆ ತಾಲೂಕು ಕಸಾಪ ಅಧ್ಯಕ್ಷ ಕೋಳೆಯರ ದಯಾ ಚಂಗಪ್ಪ ಶಿಫಾರಸಿನ ಮೇಲೆ ಜಿಲ್ಲಾಧ್ಯಕ್ಷ ಎಂ.ಪಿ ಕೇಶವಕಾಮತ್ ಈ ನೇಮಕ ಮಾಡಿದ್ದಾರೆ. ಉಳಿದ ಕಾರ್ಯಕಾರಿ ಮಂಡಳಿ ಸದಸ್ಯರುಗಳನ್ನು ನೂತನ ಅಧ್ಯಕ್ಷರೊಂದಿಗೆ ಚರ್ಚಿಸಿ ಮುಂದೆ ನಿಗದಿಪಡಿಸಲಾಗುವುದು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಎಸ್. ಐ. ಮುನೀರ್ ಅಹ್ಮದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.