ಜಿಲ್ಲೆ

ಹೋಬಳಿ ಮಟ್ಟದ ಕ್ರೀಡಾಕೂಟ; ಪೂರ್ಣ ಜ್ಞಾನ ಶಾಲೆ ಮಕ್ಕಳ ಸಾಧನೆ

ಕಲಬುರಗಿ: ದಕ್ಷಿಣ ವಲಯದ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ನಗರದ ಪೂರ್ಣ ಜ್ಞಾನ ಆಂಗ್ಲ ಮಾಧ್ಯಮ ಶಾಲೆ ಸಾಧನೆ ಮೆರೆದಿದೆ.

7 ಮೀಟರ್​ ಉದ್ದ ಜಿಗಿತದಲ್ಲಿ ಏಳನೇ ತರಗತಿ ವಿದ್ಯಾರ್ಥಿ ಗುಂಡೇರಾಯ ಅತ್ಯುತ್ತಮ ಪ್ರದರ್ಶನ ನೀಡಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಇನ್ನುಳಿದ ಮಕ್ಕಳು ವಿವಿಧ ಆಟಗಳಲ್ಲಿ ಪ್ರಥಮ, ದ್ವಿತೀಯ ಸ್ಥಾನ ಪಡೆದು ಗಮನಸೆಳೆದಿದ್ದಾರೆ.

ಮಕ್ಕಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು, ಮುಖ್ಯಗುರುಗಳು ಹಾಗೂ ಶಿಕ್ಷಕರು ಸಂತಸ ವ್ಯಕ್ತಪಡಿಸಿದ್ದಾರೆ.