ಚಾಮರಾಜನಗರ: ತಾಲೂಕಿನ ಮರಿಯಾಲ ಗ್ರಾಮದ ಶ್ರೀಮುರುಘ ರಾಜೇಂದ್ರಸ್ವಾಮಿ ವಿದ್ಯಾಸಂಸ್ಥೆಯ ಆವರಣದಲ್ಲಿ ಶುಕ್ರವಾರ 79ನೇ ಸ್ವಾತಂತ್ರ್ಯ ದಿನ ಆಚರಣೆ ಮಾಡಲಾಯಿತು.
ವಿದ್ಯಾಸಂಸ್ಥೆಯ ಅಧ್ಯಕ್ಷ ಶ್ರೀ ಇಮ್ಮಡಿ ಮುರುಘ ರಾಜೇಂದ್ರ ಸ್ವಾಮೀಜಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರನ್ನು ಇಂದು ನಾವೆಲ್ಲರು ಸ್ಮರಿಸಬೇಕು. ವಿದ್ಯಾರ್ಥಿಗಳು ಅವರ ಜೀವನ ಚರಿತ್ರೆಯನ್ನು ಅರಿತು ಮಾರ್ಗದಲ್ಲಿ ಸಾಗಬೇಕು ಎಂದು ತಿಳಿಸಿದರು.
ಪ್ರೌಢಶಾಲೆಯ ಮುಖ್ಯಶಿಕ್ಷಕ ಪ್ರಸನ್ನ ಮಾತನಾಡಿದರು. ಸಿಬಿಎಸ್‌ಇ ಹಾಗೂ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ದೇಶಭಕ್ತಿಗೀತೆ ನೃತ್ಯವನ್ನು ಪ್ರದರ್ಶಿಸಲಾಯಿತು. ರೋಟರಿ ಸಿಲ್ಕ್‌ಸಿಟಿ ಅಧ್ಯಕ್ಷ ಶಮಿತ್‌ಕುಮಾರ್, ಪದಾಧಿಕಾರಿಗಳಾದ ವಿಶ್ವಾಸ್, ಅಕ್ಷಯ್, ಬಸವರಾಜು ಮತ್ತು ಶಿಕ್ಷಕರು ಮತ್ತು ಸಿಬ್ಬಂದಿ ವರ್ಗ ಹಾಜರಿದ್ದರು.