ಚಾಮರಾಜನಗರ: ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ಮಹತ್ವದ ನಿರೀಕ್ಷೆ ಹುಟ್ಟುಹಾಕಿರುವ ಸಚಿವ ಸಂಪುಟ ಸಭೆ ೆ.13ರ ಬದಲು ೆ.15ರಂದು ನಡೆಯಲಿದೆ.
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಈ ಮೊದಲು ೆ.13ರಂದು ಸಚಿವ ಸಂಪುಟ ಸಭೆ ನಿಗದಿಯಾಗಿತ್ತು. ಇದನ್ನು ೆ.15ಕ್ಕೆ ಮುಂದೂಡಲಾಗಿದ್ದು, ಕ್ಯಾಬಿನೆಟ್ ಮೀಟಿಂಗ್ ಸಿದ್ಧತೆ ಸಂಬಂಧ ನಗರದ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭಾಂಗಣದಲ್ಲಿ ರೇಷ್ಮೆ, ಪಶು ಸಂಗೋಪನೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ಮಂಗಳವಾರ ಸಭೆ ನಡೆಯಿತು.
ಸಭೆಯಲ್ಲೇನು ಚರ್ಚೆಯಾಯ್ತು?: ಸಭೆಯಲ್ಲಿ ಇಲಾಖಾವಾರು ಅಧಿಕಾರಿಗಳು ಅಭಿವೃದ್ದಿ ಕೆಲಸಗಳ ಸಂಬಂಧ ಮಾಹಿತಿ ವಿವರಗಳನ್ನು ಪಡೆದುಕೊಂಡರು. ಇದಕ್ಕಾಗಿ ಸಿದ್ಧಪಡಿಸಿದ್ದ ಪುಸ್ತಕದಲ್ಲಿ ಹಲವು ಅಂಕಿ-ಅಂಶಗಳ ಮಾಹಿತಿಯನ್ನು ಪಡೆದುಕೊಳ್ಳಲಾಯಿತು. ಚಾಮರಾಜನಗರ ಮತ್ತು ಕೊಳ್ಳೇಗಾಲ ನಗರಸಭೆ, ಗುಂಡ್ಲುಪೇಟೆ ಪುರಸಭೆ, ಯಳಂದೂರು ಮತ್ತು ಹನೂರು ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯ ವಾರ್ಡ್‌ಗಳಲ್ಲಿರುವ 2024ಕ್ಕೆ ಇರಬಹುದಾದ ಅಂದಾಜು ಜನಸಂಖ್ಯೆಯ(ಸ್ವಚ್ಛ ಭಾರತ್ ಮಿಷನ್ ಡಿ.ಪಿ.ಆರ್ ಅನುಸಾರ) ಮಾಹಿತಿ ಪಡೆದುಕೊಳ್ಳಲಾಗಿದೆ. ಇದರಲ್ಲಿ ಯಳಂದೂರು, ಕೊಳ್ಳೇಗಾಲ, ಹನೂರು, ಗುಂಡ್ಲುಪೇಟೆ, ಚಾಮರಾಜನಗರ ತಾಲೂಕುಗಳ ಸಮಗ್ರ ಮೂಲಸೌಕರ್ಯ ಮತ್ತು ಅಭಿವೃದ್ಧಿ ಕಾಮಗಾರಿಗಳ ಯೋಜನೆ ವಿವರ, ಅಂದಾಜು ವೆಚ್ಚದ ಮಾಹಿತಿಯನ್ನು ಪಡೆದುಕೊಂಡರು.
ಸಿಎಂ ಗಮನಕ್ಕೆ ತರುತ್ತೇನೆ: ಸಚಿವ ಸಂಪುಟ ಸಭೆಯನ್ನು ಫೆ.15ರಂದು ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಪಶುಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಮೊದಲು ೆ.13ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸಲು ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ 13, 14ರಂದು ಬೆಂಗಳೂರಿನಲ್ಲಿ ಗ್ಲೋಬಲ್ ಇನ್ವೆಸ್ಟ್‌ರ್ ಮೀಟ್ ಇರುವುದರಿಂದ ಸಚಿವ ಸಂಪುಟ ಸಭೆಯನ್ನು ಫೆ.15ಕ್ಕೆ ನಿಗದಿ ಮಾಡಲಾಗಿದೆ ಎಂದರು.
ಸಚಿವ ಸಂಪುಟ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಂದು ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಲಾಗಿದೆ. ಇಲಾಖಾವಾರು ಅಧಿಕಾರಿಗಳು ಅಭಿವೃದ್ದಿ ಕೆಲಸಗಳ ಸಂಬಂಧ ಮಾಹಿತಿ ವಿವರಗಳನ್ನು ನೀಡಿದ್ದಾರೆ. ಈ ಕುರಿತು ಸಾಧಕ ಬಾಧಕಗಳ ಬಗ್ಗೆ ಚರ್ಚಿಸಿ ಪರಿಹಾರ ಕಲ್ಪಿಸಬೇಕಿದೆ. ಮುಖ್ಯಮಂತ್ರಿಗಳ ಗಮನಕ್ಕೆ ತಂದು ಅಭಿವೃದ್ದಿ ಸಂಬಂಧ ಏನೇನೂ ಸಾಧ್ಯವೋ ಅವೆಲ್ಲವನ್ನೂ ಮಾಡಲಿದ್ದೇವೆ ಎಂದು ತಿಳಿಸಿದರು.
ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎ.ಆರ್. ಕೃಷ್ಣಮೂರ್ತಿ, ಎಂ.ಆರ್. ಮಂಜುನಾಥ್, ವಿಧಾನ ಪರಿಷತ್ತಿನ ಸದಸ್ಯ ಡಾ. ಡಿ. ತಿಮ್ಮಯ್ಯ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ವಿ. ಚಂದ್ರು, ಕಾವೇರಿ ಜಲಾನಯನ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಪಿ. ಮರಿಸ್ವಾಮಿ, ಚೂಡಾ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ (ಮುನ್ನಾ), ನಗರಸಭೆ ಅಧ್ಯಕ್ಷ ಎಸ್.ಸುರೇಶ್, ಇನ್ನಿತರರು ಇದ್ದರು.