ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ ವಿಶ್ವ ಕ್ಷಯರೋಗದ ದಿನಾಚರಣೆಯನ್ನು ಡಿಎಚ್‌ಒ ಡಾ.ಅಶ್ವಥ್ ಬಾಬು ಉದ್ಘಾಟಿಸಿದರು. ಡಾ.ಗೀತಾ, ಡಾ.ವಿದ್ಯಾಸಾಗರ್, ಡಾ.ಮಂಜುನಾಥ್, ಡಾ. ಶಶಿಕಲಾ ಮತ್ತಿತರರಿದ್ದರು. 
ಜಿಲ್ಲೆ

೨೦೨೫ ರ ಅಂತ್ಯಕ್ಕೆ ಜಿಲ್ಲೆಯನ್ನು ಕ್ಷಯಮುಕ್ತಗೊಳಿಸುವ ಗುರಿ

ಚಿಕ್ಕಮಗಳೂರು: ಕಾಫಿನಾಡು ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ಷಯರೋಗದ ಬಗ್ಗೆ ವಿವಿಧ ರೀತಿಯ ಜನಜಾಗೃತಿ ಮೂಡಿಸುವ ಮೂಲಕ ೨೦೨೫ರ ಅಂತ್ಯಕ್ಕೆ ಜಿಲ್ಲೆಯನ್ನು ಕ್ಷಯಮುಕ್ತಗೊಳಿಸುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವಥ್‌ಬಾಬು ತಿಳಿಸಿದರು.

ನಗರದ ಕುವೆಂಪು ಕಲಾಮಂದಿರದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲಾ ್ಲಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರ, ಸರ್ಕಾರೇತರ ಸಂಘ-ಸAಸ್ಥೆಗಳು, ವಿವಿಧ ಕಾಲೇಜುಗಳ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಕ್ಷಯರೋಗದ ದಿನ ೨೦೨೫ ಮತ್ತು ಕ್ಷಯ ಮುಕ್ತ ಗ್ರಾಮ ಪಂಚಾಯಿತಿ ಪ್ರಶಸ್ತಿ ಪ್ರಧಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಪ್ರತಿವರ್ಷ ಮಾ. ೨೪ನ್ನು ವಿಶ್ವ ಕ್ಷಯರೋಗ ದಿನವನ್ನಾಗಿ ಆಚರಣೆ ಮಾಡುತ್ತಿದ್ದು, ಟಿಬಿ ಕಾಯಿಲೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ. ಈ ಕಾಯಿಲೆಯಿಂದಾಗುವ ಅನಾನುಕೂಲಗಳ ಬಗ್ಗೆ ಜಾಥಾ ನಡೆಸಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.

ಈ ಸಂಬAಧ ಜಿಲ್ಲಾದ್ಯಂತ ತಾಲೂಕು ಮಟ್ಟದಲ್ಲಿ ಹಾಗೂ ಸ್ಥಳೀಯ ಗ್ರಾಮ ಪಂಚಾಯಿತಿ ಮಟ್ಟದ ಜನಪ್ರತಿನಿಧಿಗಳಿಗೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ.ಹರೀಶ್ ಬಾಬು ಮಾತನಾಡಿ, ಟಿಬಿ ರೋಗವನ್ನು ಪತ್ತೆ ಹಚ್ಚಿ ಗುಣಮುಖರಾಗಲು ಬೇಕಾದ ಚಿಕಿತ್ಸೆ ಇಂದು ಎಲ್ಲೆಡೆ ಲಭ್ಯವಿದೆ. ಜಿಲ್ಲೆಯಲ್ಲಿ ಈಗಾಗಲೇ ಕ್ಷಯರೋಗ ಮುಕ್ತ ಗ್ರಾಮ ಪಂಚಾಯಿತಿ ಅಡಿಯಲ್ಲಿ ೫೭ ಗ್ರಾಮ ಪಂಚಾಯಿತಿಗಳನ್ನು ಟಿಬಿ ಮುಕ್ತಗೊಳಿಸಿz್ದೆÃವೆ. ೨೦೨೫ರ ಅಂತ್ಯಕ್ಕೆ ಜಿಲ್ಲೆಯ ೫೨೭ ಗ್ರಾಮ ಪಂಚಾಯಿತಿಗಳನ್ನು ಕ್ಷಯರೋಗ ಮುಕ್ತಗೊಳಿಸುವ ಗುರಿ ಹೊಂದಲಾಗಿದೆ ಎಂದರು.

ಜಿಲ್ಲೆಯನ್ನು ಟಿಬಿ ಮುಕ್ತಗೊಳಿಸಲು ಹಲವಾರು ರೀತಿಯ ವಿವಿಧ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಈ ವರ್ಷದ ಘೋಷವಾಕ್ಯ ಹೌದು! ನಾವು ಕ್ಷಯರೋಗವನ್ನು ಕೊನೆಗಾಣಿಸಬಹುದು (ಬದ್ಧತೆ, ಹೂಡಿಕೆ, ವಿತರಣೆ) ಈ ಮೂಲಕ ಕ್ಷಯರೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಡಾ. ವಿದ್ಯಾಸಾಗರ್ ವಿಶೇಷ ಉಪನ್ಯಾಸ ನೀಡಿದರು, ಜಿಲ್ಲಾ ಆಯುಷ್ ಅಧಿಕಾರಿ ಡಾ. ಗೀತಾ, ಎನ್‌ವಿಬಿಡಿಸಿಪಿ ಅಧಿಕಾರಿ ಡಾ. ಬಾಲಕೃಷ್ಣ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಮಂಜುನಾಥ್, ಕುಟುಂಬ ಕಲ್ಯಾಣಾಧಿಕಾರಿ ಡಾ. ಶಶಿಕಲಾ, ಪ್ರಭುಕುಮಾರ್, ಕಿರಣ್‌ಕುಮಾರ್ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮಕ್ಕು ಮೊದಲು ತಾಲೂಕು ಪಂಚಾಯಿತಿ ಕಚೇರಿಯಿಂದ ಕುವೆಂಪಿ ಕಲಾಮಂದಿರದವರೆಗೆ ಜಾಥಾ ನಡೆಯಿತು.