filter: 0; jpegRotation: 0; fileterIntensity: 0.000000; filterMask: 0; module:1facing:0; hw-remosaic: 0; touch: (-1.0, -1.0); modeInfo: ; sceneMode: NightHDR; cct_value: 0; AI_Scene: (-1, -1); aec_lux: 56.0; hist255: 0.0; hist252~255: 0.0; hist0~15: 0.0; 
ಜಿಲ್ಲೆ

೨೮ರಂದು ಚಿಕ್ಕೋಡಿಯಲ್ಲಿ ಲಿಂಗಾಯತ ಸಮಾವೇಶ

ಚಿಕ್ಕೋಡಿ: ಕಾನೂನಾತ್ಮಕವಾಗಿ ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ಪಡೆದುಕೊಳ್ಳುವ ಉದ್ದೇಶದಿಂದ ಏ.೨೮ರಂದು ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾಮಟ್ಟದ ಲಿಂಗಾಯತ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ಚಿಕ್ಕೋಡಿ ಜಿಲ್ಲಾಧ್ಯಕ್ಷ ಅಣ್ಣಪ್ಪ ಹಳಿಜೋಳೆ ಹೇಳಿದರು.

ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹರಿಹರದ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಸಾನ್ನಿಧ್ಯ, ಸಮುದಾಯದ ಹಾಲಿ, ಮಾಜಿ ಶಾಸಕ, ಸಂಸದರು ಸೇರಿ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಅಂದು ಬೆಳಗ್ಗೆ ೧೦ಕ್ಕೆ ಪಟ್ಟಣದ ರಾಣಿ ಚನ್ನಮ್ಮ ವೃತ್ತದಿಂದ ಕುಂಭಮೇಳ ಮೆರವಣಿಗೆ ಆರಂಭಗೊಳ್ಳುವುದು. ೫೦೧ ಜನರಿಗೆ ವಚನಾನಂದ ಸ್ವಾಮೀಜಿ ಲಿಂಗದೀಕ್ಷೆ ನೀಡುವರು. ಬಳಿಕ ಪದ್ಮಾ ಮಂಗಲ ಭವನದಲ್ಲಿ ಸಮಾವೇಶ ಕಾರ್ಯಕ್ರಮ ನಡೆಯಲಿದೆ ಎಂದರು.

ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ಬೆಳಗಾವಿ ಜಿಲ್ಲಾ ಕಾರ್ಯದರ್ಶಿ ಗುರುಗೌಡ ಪಾಟೀಲ ಮಾತನಾಡಿ, ಸಮಾವೇಶದಲ್ಲಿ ಮೀಸಲಾತಿ ಹೋರಾಟದ ರೂಪುರೇಷ ತಯಾರಿಸಲಾಗುವುದು ಎಂದರು.

ಚಿಕ್ಕೋಡಿ ಜಿಲ್ಲಾ ಉಪಾಧ್ಯಕ್ಷ ಮಲ್ಲಪ್ಪ ಕಲ್ಲಟ್ಟಿ, ಯುವ ಘಟಕದ ಜಿಲ್ಲಾಧ್ಯಕ್ಷ ಚನ್ನಪ್ಪ ಅಂಬೋಳೆ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮೀನಾಕ್ಷಿ ಪಾಟೀಲ, ಮಹಿಳಾ ಘಟಕದ ಉಪಾಧ್ಯಕ್ಷೆ ಅನಸೂಯಾ ಚನ್ನವರ, ಮಲ್ಲಿಕಾರ್ಜುನ ಪಾಟೀಲ ಇದ್ದರು.