ಬಾಗಲಕೋಟೆ: ನಗರದ ಎನ್.ಎಚ್-೩೬೭ ರಿಂದ ಎಸ್‌ಟಿಪಿ ಮತ್ತು ಎಸ್‌ಡಬ್ಲೂಎಂ ಹಳೇ ಎಪಿಎಂಸಿ ಮೂಲಕ ಶೀಗಿಕೇರಿ ಆರ್‌ಓಬಿ ವರೆಗಿನ ಮುಖ್ಯ ರಸ್ತೆ ಹಾಗೂ ಆಂತರಿಕ ರಸ್ತೆಗಳ ನಿರ್ಮಾಣ ಸೇರಿ ಒಟ್ಟು ೪.೨೫ ಕೋಟಿ ರೂ.ಗಳ ವೆಚ್ಚದ ಕಾಮಗಾರಿಗೆ ಬಾಗಲಕೋಟೆ ಶಾಸಕ ಹಾಗೂ ಬಿಟಿಡಿಎ ಅಧ್ಯಕ್ಷ ಎಚ್.ವೈ.ಮೇಟಿ ಚಾಲನೆ ನೀಡಿದರು.
ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಽಕಾರದ ವತಿಯಿಂದ ಭಾನುವಾರ ಹಮ್ಮಿಕೊಂಡ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಒಟ್ಟು ೧.೩೮ ಕಿ.ಮೀ ಉದ್ದದ ಡಾಂಬರ ರಸ್ತೆ ನಿರ್ಮಾಣವಾಗಿದೆ. ಇದಕ್ಕೆ ಹೊಂದಿಕೊAಡು ಬರುವ ಸಣ್ಣ ಪುಟ್ಟ ರಸ್ತೆಗಳು ಇದ್ದು, ಪ್ರತಿಯೊಂದು ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ನಿಗದಿತ ಅವಽಯಲ್ಲಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ನಗರಸಭೆ ಅಧ್ಯಕ್ಷೆ ಸವಿತಾ ಲೆಂಕೆನ್ನವರ, ಉಪಾದ್ಯಕ್ಷೆ ಶೋಭಾ ದಾಸ್, ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಽಕಾರದ ಕಾರ್ಯನಿರ್ವಾಹಕ ಅಭಿಯಂತರ ಒಟವಟಿ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಶ್ರೀಕಾಂತ ಹಿರೇಗೌಡರ, ಶಾಖಾಽಕಾರಿ ಎಸ್.ಡಿ.ಸಣ್ಣಕ್ಕಿ, ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ರಕ್ಷಿತಾ ಈಟಿ, ನಗರಸಭೆ ಸದಸ್ಯ ಚನ್ನವೀರ ಅಂಗಡಿ ಮುಖಂಡರಾದ ನಾಗರಾಜ ಹದ್ಲಿ, ಶ್ರೀನಿವಾಸ ಬಳ್ಳಾರಿ, ರಾಜು ಮನ್ನಿಕೇರಿ ಹಾಗೂ ಇತರರು ಇದ್ದರು.