ರೋಹಿತ್ ಶರ್ಮಾ (ಭಾರತ)
ಭಾರತದ ಮಾಜಿ ನಾಯಕ ರೋಹಿತ್ ಶರ್ಮಾ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, ಒಂದಲ್ಲ, ಬರೋಬ್ಬರಿ ನಾಲ್ಕು ವಿಭಿನ್ನ ತಂಡಗಳ (ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ಶ್ರೀಲಂಕಾ ಮತ್ತು ವೆಸ್ಟ್ ಇಂಡೀಸ್) ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಮೂರೂ ಮಾದರಿಗಳಲ್ಲಿ ಶತಕ ಸಿಡಿಸಿದ ವಿಶ್ವದ ಮೊದಲ ಮತ್ತು ಏಕೈಕ ಆಟಗಾರರಾಗಿದ್ದಾರೆ.ಕೆ.ಎಲ್. ರಾಹುಲ್ (ಭಾರತ)
ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ಕೆ.ಎಲ್. ರಾಹುಲ್ ಅವರು ವೆಸ್ಟ್ ಇಂಡೀಸ್ ಮತ್ತು ಇಂಗ್ಲೆಂಡ್ ತಂಡಗಳ ವಿರುದ್ಧ ಟೆಸ್ಟ್, ಏಕದಿನ ಹಾಗೂ ಟಿ20 ಮಾದರಿಗಳಲ್ಲಿ ಕನಿಷ್ಠ ತಲಾ ಒಂದು ಶತಕ ಬಾರಿಸುವ ಮೂಲಕ ಈ ವಿಶೇಷ ದಾಖಲೆಗೆ ಪಾತ್ರರಾಗಿದ್ದಾರೆ.
ಬಾಬರ್ ಅಜಮ್ (ಪಾಕಿಸ್ತಾನ)
ಪಾಕಿಸ್ತಾನದ ಬಾಬರ್ ಅಜಮ್ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡಗಳ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಮೂರೂ ಮಾದರಿಗಳಲ್ಲಿ ಶತಕ ಸಿಡಿಸಿ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.ತಿಲಕರತ್ನೆ ದಿಲ್ಶಾನ್ (ಶ್ರೀಲಂಕಾ)
ಶ್ರೀಲಂಕಾದ ಮಾಜಿ ದಿಗ್ಗಜ ಬ್ಯಾಟರ್ ತಿಲಕರತ್ನೆ ದಿಲ್ಶಾನ್ ಅವರು ತಮ್ಮ ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಎರಡು ಟೆಸ್ಟ್, ಒಂದು ಏಕದಿನ ಹಾಗೂ ಒಂದು ಟಿ20 ಶತಕಗಳನ್ನು ಬಾರಿಸಿ ಈ ಸಾಧನೆ ಮಾಡಿದ್ದಾರೆ.
ಶೇನ್ ವಾಟ್ಸನ್ (ಆಸ್ಟ್ರೇಲಿಯಾ)
ಆಸ್ಟ್ರೇಲಿಯಾದ ಮಾಜಿ ಆಲ್‌ರೌಂಡರ್ ಶೇನ್ ವಾಟ್ಸನ್ ಅವರು ಭಾರತದ ವಿರುದ್ಧ ಮೂರೂ ಮಾದರಿಗಳಲ್ಲಿ ತಲಾ ಒಂದು ಶತಕ ಸಿಡಿಸಿದ್ದಾರೆ. ವಿಶೇಷವೆಂದರೆ, ಟೀಮ್ ಇಂಡಿಯಾ ವಿರುದ್ಧ ಈ ಸಾಧನೆ ಮಾಡಿದ ವಿಶ್ವದ ಮೊದಲ ಆಟಗಾರ ಎಂಬ ಕೀರ್ತಿ ವಾಟ್ಸನ್ ಅವರದ್ದಾಗಿದೆ.
ಕ್ರಿಸ್ ಗೇಲ್ (ವೆಸ್ಟ್ ಇಂಡೀಸ್)
ವೆಸ್ಟ್ ಇಂಡೀಸ್‌ನ ಸ್ಫೋಟಕ ಬ್ಯಾಟರ್ ಕ್ರಿಸ್ ಗೇಲ್ ಅವರು ತಮ್ಮ ಎರಡು ದಶಕಗಳ ಸುದೀರ್ಘ ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ ಇಂಗ್ಲೆಂಡ್ ವಿರುದ್ಧ ಒಂದು ಟಿ20, ಮೂರು ಟೆಸ್ಟ್ ಮತ್ತು ನಾಲ್ಕು ಏಕದಿನ ಶತಕಗಳನ್ನು ಸಿಡಿಸಿ ಮಿಂಚಿದ್ದಾರೆ.
ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ)
ಪಾಕಿಸ್ತಾನದ ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ರಿಜ್ವಾನ್ ಅವರು ದಕ್ಷಿಣ ಆಫ್ರಿಕಾ ವಿರುದ್ಧ ಆಡಿದ 6 ಟೆಸ್ಟ್, 13 ಏಕದಿನ ಮತ್ತು 13 ಟಿ20 ಪಂದ್ಯಗಳಲ್ಲಿ ತಲಾ ಒಂದು ಶತಕ ಬಾರಿಸುವ ಮೂಲಕ ಈ ಸಾಲಿಗೆ ಸೇರ್ಪಡೆಯಾಗಿದ್ದಾರೆ.
ಶಾಯ್ ಹೋಪ್ (ವೆಸ್ಟ್ ಇಂಡೀಸ್)
ವೆಸ್ಟ್ ಇಂಡೀಸ್‌ನ ವಿಕೆಟ್ ಕೀಪರ್ ಬ್ಯಾಟರ್ ಶಾಯ್ ಹೋಪ್ ಭಾರತದ ವಿರುದ್ಧ ಒಂದು ಟೆಸ್ಟ್, ಐದು ಏಕದಿನ ಮತ್ತು ಎರಡು ಟಿ20 ಶತಕಗಳನ್ನು ಸಿಡಿಸಿದ್ದಾರೆ. ಗಮನಾರ್ಹ ಸಂಗತಿಯೆಂದರೆ, ಹೋಪ್ 2026ರ ಒಂದೇ ವರ್ಷದಲ್ಲಿ ಭಾರತದ ವಿರುದ್ಧ ಎರಡು ಏಕದಿನ ಮತ್ತು ಎರಡು ಟಿ20 ಶತಕಗಳನ್ನು ಬಾರಿಸಿದ್ದಾರೆ.
ಗ್ಲೆನ್ ಫಿಲಿಪ್ಸ್ (ನ್ಯೂಜಿಲೆಂಡ್)
ನ್ಯೂಜಿಲೆಂಡ್‌ನ ಗ್ಲೆನ್ ಫಿಲಿಪ್ಸ್ 2026ರಲ್ಲೇ ಭಾರತದ ವಿರುದ್ಧ ಮೂರೂ ಮಾದರಿಗಳಲ್ಲಿ ಶತಕ ಸಿಡಿಸಿ ಈ ಪಟ್ಟಿಗೆ ಹೊಸದಾಗಿ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಒಂದೇ ಕ್ಯಾಲೆಂಡರ್ ವರ್ಷದಲ್ಲಿ ಒಂದೇ ತಂಡದ ವಿರುದ್ಧ ಮೂರೂ ಮಾದರಿಯಲ್ಲಿ ಶತಕ ಬಾರಿಸಿದ ವಿಶ್ವದ ಎರಡನೇ ಆಟಗಾರ ಎಂಬ ಐತಿಹಾಸಿಕ ದಾಖಲೆ ಬರೆದಿದ್ದಾರೆ.