ಎಳನೀರು
ಎಳನೀರು ನೈಸರ್ಗಿಕ ಎಲೆಕ್ಟ್ರೋಲೈಟ್ ಪಾನೀಯವಾಗಿದ್ದು, ಇದು ಪೊಟ್ಯಾಸಿಯಮ್, ಸೋಡಿಯಂ, ಮೆಗ್ನೀಷಿಯಂ ಮತ್ತು ಕ್ಯಾಲ್ಸಿಯಂನಿಂದ ಸಮೃದ್ಧವಾಗಿದೆ.ಬಾಳೆಹಣ್ಣು
ಪೊಟ್ಯಾಸಿಯಮ್‌ನ ಅತ್ಯುತ್ತಮ ಮೂಲಗಳಲ್ಲಿ ಬಾಳೆಹಣ್ಣು ಕೂಡ ಒಂದಾಗಿದ್ದು, ಇದು ಸ್ನಾಯು ಸೆಳೆತವನ್ನು ತಡೆಗಟ್ಟಲು ಮತ್ತು ದೇಹಕ್ಕೆ ಸುಸ್ತಾದಾಗ ಶಕ್ತಿಯನ್ನು ನೀಡುತ್ತದೆ.ಆವಕಾಡೊ ಅಥವಾ ಬೆಣ್ಣೆಹಣ್ಣು
ಇದು ಬಾಳೆಹಣ್ಣಿಗಿಂತಲೂ ಹೆಚ್ಚು ಪೊಟ್ಯಾಸಿಯಮ್ ಹೊಂದಿರುತ್ತದೆ. ಇದರಲ್ಲಿ ಆರೋಗ್ಯಕರ ಕೊಬ್ಬು ಮತ್ತು ಮೆಗ್ನೀಷಿಯಂ ಇದ್ದು, ಹೃದಯದ ಆರೋಗ್ಯಕ್ಕೆ ಪೂರಕವಾಗಿದೆ.ಸಿಹಿ ಗೆಣಸು
ಇವುಗಳಲ್ಲಿ ಪೊಟ್ಯಾಸಿಯಮ್ ಮತ್ತು ಮೆಗ್ನೀಷಿಯಂ ಉತ್ತಮ ಪ್ರಮಾಣದಲ್ಲಿದೆ. ಜೊತೆಗೆ ವಿಟಮಿನ್ ಎ ಮತ್ತು ಸಿ ಕೂಡ ಇರುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ.ಕಿತ್ತಳೆ
ಕಿತ್ತಳೆ ಹಣ್ಣುಗಳಲ್ಲಿ ಪೊಟ್ಯಾಸಿಯಮ್ ಮತ್ತು ಕ್ಯಾಲ್ಸಿಯಂ ಇರುತ್ತದೆ. ಇದು ರಕ್ತದೊತ್ತಡವನ್ನು ನಿಯಂತ್ರಿಸಲು ಮತ್ತು ದೇಹದ ದ್ರವದ ಸಮತೋಲನ ಕಾಯ್ದುಕೊಳ್ಳಲು ಸಹಾಯ ಮಾಡುತ್ತದೆ.