350 ಟಾರ್ಗೆಟ್ ನೀಡಿದ ಟೀಮ್ ಇಂಡಿಯಾ
350 ಟಾರ್ಗೆಟ್ ನೀಡಿದ ಟೀಮ್ ಇಂಡಿಯಾ
ಇಂದು ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 'ರೋಕೊ' ಜೋಡಿ ಅಬ್ಬರದ ಬ್ಯಾಟಿಂಗ್. 50 ಓವರ್ ಅಂತ್ಯಕ್ಕೆ ಟೀಮ್ ಇಂಡಿಯಾ 8 ವಿಕೆಟ್ ಕಳೆದುಕೊಂಡು 349 ರನ್ ಕಲೆಹಾಕಿತು.ರೋಹಿತ್ ಶರ್ಮ ದಾಖಲೆ
ಇಂದಿನ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ (57 ರನ್) ಬಾರಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರ ಎಂಬ ದಾಖಲೆಗೆ ರೋಹಿತ್ ತಮ್ಮ ಹೆಸರನ್ನು ಸೇರಿಸಿದ್ದಾರೆ.ರೋಹಿತ್ ಅವರ 352ನೇ ಸಿಕ್ಸರ್
ಇದು ಏಕದಿನ ಪಂದ್ಯಗಳಲ್ಲಿ ರೋಹಿತ್ ಅವರ 352ನೇ ಸಿಕ್ಸರ್ ಆಗಿದೆ. ಇದಕ್ಕೂ ಮೊದಲು ಪಾಕ್ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿಯ ಹೆಸರಿನಲ್ಲಿ ಈ ದಾಖಲೆಯಿತ್ತು. ಅಫ್ರಿದಿ 398 ಪಂದ್ಯಗಳಲ್ಲಿ 351 ಸಿಕ್ಸರ್‌ಗಳನ್ನು ಬಾರಿಸಿದ್ದರೆ, ರೋಹಿತ್ ಕೇವಲ 277 ಪಂದ್ಯಗಳಲ್ಲಿ 352 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ.ದಾಖಲೆಗಳ ಸರದಾರ
ವಿರಾಟ್ ಕೊಹ್ಲಿ ಅವರ ಶತಕದಾಟ (133* ರನ್, 115 ಎಸೆತ) ಮೈದಾನದಲ್ಲಿದ್ದ ಕ್ರಿಕೆಟ್ ಅಭಿಮಾನಿಗಳ ಉತ್ಸಾಹವನ್ನು ಹೆಚ್ಚಿಸಿತು. ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಅವರಿಂದ ಒಂದೇ ಒಂದು ಶತಕದ ಅಗತ್ಯವಿತ್ತು. ಕಡೆಗೂ ಮೊದಲ ಪಂದ್ಯದಲ್ಲಿಯೇ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದಿದ್ದಾರೆ.ಸಚಿನ್ ತೆಂಡೂಲ್ಕರ್ ದಾಖಲೆ ಬ್ರೇಕ್
ಸಚಿನ್ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ 200 ಪಂದ್ಯಗಳನ್ನಾಡಿದ್ದು, 53.8 ಸರಾಸರಿಯಲ್ಲಿ 15,921 ರನ್ ಗಳಿಸಿದ್ದಾರೆ. ಇದರಲ್ಲಿ 51 ಶತಕ ಮತ್ತು 68 ಅರ್ಧಶತಕಗಳು ಸೇರಿವೆ. ಇನ್ನು ವಿರಾಟ್ ಬಗ್ಗೆ ಹೇಳುವುದಾದರೆ, 306 ಏಕದಿನ ಪಂದ್ಯಗಳನ್ನಾಡಿದ್ದು, 294 ಇನ್ನಿಂಗ್ಸ್‌ಗಳಲ್ಲಿ 57.7 ಸರಾಸರಿಯಲ್ಲಿ 14,255 ರನ್ ಗಳಿಸಿದ್ದಾರೆ. ಇದರಲ್ಲಿ 52 ಶತಕ, 76 ಅರ್ಧಶತಕ ಇವೆಕೊಹ್ಲಿ ನೋಡಲು ಮೈದಾನದೊಳಗೆ ಓಡಿಬಂದ ಫ್ಯಾನ್
ಏಕದಿನ ಪಂದ್ಯಕ್ಕೆ ತವರಿಗೆ ಬಂದ ವಿರಾಟ್ರನ್ನು ನೋಡಲು ಅನೇಕ ಅಭಿಮಾನಿಗಳು ಮೈದಾನಕ್ಕೆ ಬಂದಿದ್ದರು. ಅಂತೆಯೇ, ಇಲ್ಲೊಬ್ಬ ಕೊಹ್ಲಿಯ ಅಪ್ಪಟ ಅಭಿಮಾನಿಯೊಬ್ಬ, ವಿರಾಟ್ರನ್ನು ಜೀವನದಲ್ಲಿ ಒಮ್ಮೆಯಾದ್ರೂ ಮುಟ್ಟಬೇಕು ಎಂಬ ಹೆಬ್ಬಯಕೆಯಲ್ಲಿ ಮೈದಾನದೊಳಗೆ ಓಡಿಬಂದು, ಕೊಹ್ಲಿ ಕಾಲಿಗೆ ಬಿದ್ದಿದ್ದಾನೆ.