ಚಾಮುಂಡಿಬೆಟ್ಟದಲ್ಲಿ ಭಾನುವಾರ ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಮಾಡುವ ಮೂಲಕ, ಬೆಳ್ಳಿ ರಥದಲ್ಲಿರುವ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ 11 ದಿನಗಳ ನಾಡಹಬ್ಬ ದಸರಾಕ್ಕೆ ಕೊಪ್ಪಳದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಹಾಗೂ ಸಿಎಂ ಡಿಕೆ ಶಿವಕುಮಾರ್ ಚಾಲನೆ ಕೊಟ್ಟರು.
11 ದಿನದ ನಡೆಯಲಿರುವ ನಾಡ ಹಬ್ಬ ದಸರಾಕ್ಕೆ ಚಾಲನೆ ನೀಡಿದ ನಂತರ ನಡೆದ ಕಾರ್ಯಕ್ರಮದಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರು ಗವಿಸಿದ್ದೇಶ್ವರ ಸ್ವಾಮೀಜಿ ಅವರಿಗೆ ಕಾಲಿಗೆ ಬಿದ್ದು ನಮಸ್ಕರಿಸಿದರು.
ಭಾನುವಾರ(ಅ.೧೧)ರಂದು ಬೆಳಗ್ಗೆ 11;50ರಿಂದ ಮಧ್ಯಾಹ್ನ 12;13ರೊಳಗೆ ಸಲ್ಲುವ ಶುಭ ಧನುರ್ ಲಗ್ನದಲ್ಲಿ ಉದ್ಘಾಟನೆ ನಡೆದ ನಂತರ, ಗವಿ ಸಿದ್ದೇಶ್ವರ ಸ್ವಾಮೀಜಿಯವರು ಮಾತನಾಡಿದರು.
ದಸರಾ ಮಹೋತ್ಸವದ ಉದ್ಘಾಟನೆಯನ್ನು ಪ್ರತಿ ವರ್ಷದಂತೆ ಈ ವರ್ಷವು ನಾಡದೇವಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಚಿಕ್ಕ ಬೆಳ್ಳಿ ರಥದಲ್ಲಿಟ್ಟು ಪುಷ್ಪಾರ್ಚನೆ ಮಾಡಲಾಯಿತು.
ನವರಾತ್ರಿಯ ಆರಂಭದ ದಿನವಾದ ಭಾನುವಾರ(ಅ.11) ಮುಂಜಾನೆ 4:30ರಿಂದಲೇ ಚಾಮುಂಡೇಶ್ವರಿ ದೇವಾಲಯದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ಜರುಗಿತು. ಬೆಳಗಿನಿಂದಲೇ ಮಹಾನ್ಯಾಸಪೂರ್ವಕ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ ಸೇರಿದಂತೆ ವಿವಿಧ ಪೂಜಾ ಕಾರ್ಯಗಳು ನಡೆದವು.
ಒಂಭತ್ತು ದಿನವೂ ವಿವಿಧ ಪೂಜಾ ಕಾರ್ಯಗಳು ಜರುಗಲಿದ್ದು, ಪ್ರತಿ ದಿನ ಸಂಜೆ 4:30ರಿಂದ 5:30ರವರೆಗೆ ಮಹಾಬಲೇಶ್ವರ ದೇವಾಲಯ ಮುಂಭಾಗ ಇರುವ ದರ್ಬಾರ್ ಮಂಟಪದಲ್ಲಿ ಚಾಮುಂಡೇಶ್ವರಿ ದೇವಿಗೆ ದರ್ಬಾರ್ ಉತ್ಸವ ನೆರವೇರಲಿದೆ.
ಅ.18ರಂದು ದುರ್ಗಾ ಅಲಂಕಾರ, ಅ.19ರಂದು ಮಹಾಲಕ್ಷ್ಮಿ, ಅ.20ರಂದು ಅಶ್ವಾರೋಹಣ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಪ್ರತಿ ದಿನ ಬೆಳಿಗ್ಗೆ 7:30ರಿಂದ 2 ಗಂಟೆ, ಮಧ್ಯಾಹ್ನ 3;30ರಿಂದ 6ಗಂಟೆ ಹಾಗೂ ಸಂಜೆ.೭.೩೦ರಿAದ ರಾತ್ರಿ ೯ಗಂಟೆಯವರೆಗೆ ಭಕ್ತರು ದೇವಿಯ ದರ್ಶನ ಪಡೆಯವುದಕ್ಕೆ ಅವಕಾಶ ಕಲ್ಪಿಸಲಾಗಿದೆ.
ಚಾಮುಂಡಿಬೆಟ್ಟದಲ್ಲಿ ನಾಳೆ ಗಣ್ಯರು ಪುಷ್ಪಾರ್ಚನೆ ಮಾಡಲಿರುವ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಅರಮನೆಯಿಂದ ತಂದು, ಚಾಮುಂಡಿಬೆಟ್ಟದ ದೇವಾಲಯದಲ್ಲಿಡಲಾಗಿದೆ.ಪ್ರತಿ ವರ್ಷ ದಸರಾ ಮಹೋತ್ಸವದ ಆರಂಭಕ್ಕೆ ಮೂರು ದಿನ ಮೊದಲೇ ಅರಮನೆಯಿಂದ ಚಾಮುಂಡಿಬೆಟ್ಟಕ್ಕೆ ಮೂರ್ತಿ ತರಲಾಗುತ್ತದೆ. ನಂತರ ಸ್ವಚ್ಛಗೊಳಿಸಿ ನೈವೇದ್ಯ ಮಾಡಿ, ಪೂಜೆ ಸಲ್ಲಿಸುವ ಮೂಲಕ ಶಕ್ತಿ ತುಂಬಲಾಗುತ್ತದೆ.