ಫೋಟೋ ಗ್ಯಾಲರಿ

ನಮೋ ಆಡಳಿತಕ್ಕೆ 25ರ ಸಂಭ್ರಮ: ವಿನಾಯಕ ಮಂದಿರದಲ್ಲಿ ವಿಶೇಷ ಪೂಜೆ

ವಿಜಯವಾಣಿ ಸುದ್ದಿ ಜಾಲ

ನಮೋ ಆಡಳಿತಕ್ಕೆ ‘25’ ವರ್ಷ

ಗುಜರಾತ್​ನ ಮುಖ್ಯಮಂತ್ರಿಯಾಗಿ, ದೇಶದ ಪ್ರಧಾನಿಯಾಗಿ 25 ವರ್ಷಗಳನ್ನು ನರೇಂದ್ರ ಮೋದಿ ಅವರು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಈ ಹಿನ್ನೆಲೆ ವಿನಾಯಕ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ದೇಶ ಸೇವೆಯನ್ನು ಮುಂದುವರೆಸುವ ತಮ್ಮ ಪ್ರತಿಜ್ಞೆಯನ್ನು ನವೀಕರಿಸಿದ್ದಾರೆ.

ಬಿಜೆಪಿ ನಾಯಕರಿಂದ ಶುಭ ಹಾರೈಕೆ

ಪ್ರಧಾನಿ ಮೋದಿ ಅವರು ರಾಜಕೀಯಕ್ಕೆ ಕಾಲಿಟ್ಟು 25 ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಸೇರಿದಂತೆ ಎನ್‌ಡಿಎ ಮೈತ್ರಿಕೂಟದ ನಾಯಕರು ಎಕ್ಸ್​ ಸೇರಿದಂತೆ ಸೋಶಿಯಲ್​ ಮೀಡಿಯಾ ಮೂಲಕ ಶುಭ ಹಾರೈಸಿದ್ದಾರೆ.

ಮೂರು ಬಾರಿ ಪ್ರಧಾನಿಯಾಗಿ ಸೇವೆ

ಅಕ್ಟೋಬರ್ 7, 2001 ರಂದು ಗುಜರಾತ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಅವರು, ನಂತರ 2014ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಐತಿಹಾಸಿಕ ವಿಜಯದತ್ತ ಮುನ್ನಡೆಸಿ, ಸತತ ಮೂರು ಬಾರಿ ಭಾರತದ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಮೋದಿಯವರ ಸಾಧನೆಗೆ ಶ್ಲಾಘನೆ

ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾಗಿ 12 ವರ್ಷ, ಗುಜರಾತ್ ಸಿಎಂ ಆಗಿ13 ವರ್ಷ ಸೇರಿದಂತೆ ಒಟ್ಟು 25 ವರ್ಷ ಸೇವೆ ಸಲ್ಲಿಸಿದ್ದಾರೆ. ಅವರ ಈ ಸಾಧನೆಯನ್ನು ಶ್ಲಾಘಿಸಿ ಕೇಂದ್ರ ಸಚಿವ ಸಂಪುಟವು ಮಂಗಳವಾರ ನಿರ್ಣಯ ಅಂಗೀಕಾರ ತೆಗೆದುಕೊಂಡಿತ್ತು.

ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಶುಭ ಹಾರೈಸಿದ್ದಾರೆ. ಪ್ರಧಾನಿ ಮೋದಿ ಅವರ ಸೇವೆಯು 25 ಕೋಟಿ ಜನರನ್ನು ಬಡತನದಿಂದ ಮುಕ್ತಗೊಳಿಸಿರುವುದು ಮರೆಯಲಾರದ ಐತಿಹಾಸಿಕ ಸಾಧನೆ ಎಂದಿದ್ದಾರೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್