1. ನೆನಪಿನ ಶಕ್ತಿಯನ್ನು ಹೆಚ್ಚಿಸುತ್ತದೆ
1. ನೆನಪಿನ ಶಕ್ತಿಯನ್ನು ಹೆಚ್ಚಿಸುತ್ತದೆ
ದಾಳಿಂಬೆಯಲ್ಲಿರುವ ಪಾಲಿಫೆನಾಲ್‌ಗಳು ಮೆದುಳಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದಾಗಿರುತ್ತದೆ. ಸಂಶೋಧನೆಗಳ ಪ್ರಕಾರ, ಪ್ರತಿದಿನ ದಾಳಿಂಬೆ ಜ್ಯೂಸ್ ಕುಡಿಯುವುದು ನೆನಪಿನ ಶಕ್ತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.2. ಉರಿಯೂತ ನಿವಾರಕ
ಇದರಲ್ಲಿರುವ ಹೆಚ್ಚಿನ ಪ್ರಮಾಣದ ಆಂಟಿ-ಆಕ್ಸಿಡೆಂಟ್‌ಗಳು ದೇಹದಲ್ಲಿನ ದೀರ್ಘಕಾಲದ ಉರಿಯೂತವನ್ನು ಕಡಿಮೆ ಮಾಡುತ್ತವೆ. ಇದು ಕೀಲು ನೋವು ಮತ್ತು ಸಂಧಿವಾತದಂತಹ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಉತ್ತಮ ಔಷಧಿಯಾಗಿದೆ.3. ಕ್ಯಾನ್ಸರ್ ವಿರುದ್ಧ ರಕ್ಷಣೆ
ದಾಳಿಂಬೆ ರಸವು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುವ ಗುಣವನ್ನು ಹೊಂದಿದೆ ಎಂದು ಹಲವು ಅಧ್ಯಯನಗಳು ಸೂಚಿಸಿವೆ. ವಿಶೇಷವಾಗಿ ಪ್ರಾಸ್ಟೇಟ್ ಮತ್ತು ಸ್ತನ ಕ್ಯಾನ್ಸರ್ ಕೋಶಗಳ ವಿರುದ್ಧ ಇದು ಪರಿಣಾಮಕಾರಿ ಎಂದು ಹೇಳಲಾಗುತ್ತದೆ.4. ಹೃದಯದ ಆರೋಗ್ಯಕ್ಕೆ ವರದಾನ
ದಾಳಿಂಬೆ ಜ್ಯೂಸ್ ರಕ್ತನಾಳಗಳಲ್ಲಿ ಕೊಲೆಸ್ಟ್ರಾಲ್ ಸಂಗ್ರಹವಾಗುವುದನ್ನು ತಡೆಯುತ್ತದೆ ಮತ್ತು ರಕ್ತದ ಹರಿವನ್ನು ಸುಧಾರಿಸುತ್ತದೆ. ಇದು ಅಧಿಕ ರಕ್ತದೊತ್ತಡವನ್ನು (BP) ನಿಯಂತ್ರಿಸಲು ಸಹಾಯ ಮಾಡಿ, ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡುತ್ತದೆ.5. ಜೀರ್ಣಕ್ರಿಯೆಗೆ ಪೂರಕ
ಇದು ಹೊಟ್ಟೆಯ ಉರಿಯೂತವನ್ನು ಕಡಿಮೆ ಮಾಡಿ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಅಲ್ಲದೆ, ಕ್ರೋನ್ಸ್ ಕಾಯಿಲೆ ಅಥವಾ ಅಲ್ಸರೇಟಿವ್ ಕೊಲೈಟಿಸ್ ಇರುವವರಿಗೆ ಇದು ಪ್ರಯೋಜನಕಾರಿಯಾಗುತ್ತದೆ.